ಬಿ.ವೈ.ವಿಜಯೇಂದ್ರ ಹೇಳಿಕೆ (ETV Bharat) ಕೊಪ್ಪಳ:ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ತುಂಡಾದ ಘಟನೆಯ ಜವಾಬ್ದಾರಿಯನ್ನು ಅವರಿರವ ಮೇಲೆ ಹಾಕದೇ ರಾಜ್ಯ ಸರಕಾರವೇ ಹೊರಬೇಕು. ಜಲಾಶಯದ ನೀರನ್ನೇ ನಂಬಿರುವ ರೈತರಿಗೆ ಪ್ರತೀ ಹೆಕ್ಟೇರ್ಗೆ 50 ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದರು.
ವಿಜಯನಗರದ ಟಿಬಿ ಡ್ಯಾಮ್ಗೆ ಇಂದು ಭೇಟಿ ನೀಡಿ ಮಾತನಾಡಿದ ಅವರು, ಕೊಪ್ಪಳ, ರಾಯಚೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳ ಜನರಿಗೆ ಈ ಜಲಾಶಯ ವರವಾಗಿದೆ. ರಾಜ್ಯ ಸೇರಿದಂತೆ ನೆರೆಯ ಆಂಧ್ರ ಮತ್ತು ತೆಲಂಗಾಣ ಜಿಲ್ಲೆಯ ರೈತರೂ ಕೂಡ ತುಂಗಭದ್ರಾ ಜಲಾಶಯವನ್ನೇ ನಂಬಿಕೊಂಡಿದ್ದಾರೆ ಎಂದರು.
ಕಳೆದೆರಡು ವರ್ಷಗಳಿಂದ ಮಳೆ ಸರಿಯಾಗಿ ಬಾರದೇ ರೈತರು ಸಂಕಷ್ಟಕ್ಕೊಳಗಾಗಿದ್ದರು. ಈ ವರ್ಷ ಮುಂಗಾರು ಆರಂಭದಲ್ಲಿ ಉತ್ತಮ ಮಳೆಯಾಗಿದ್ದರಿಂದ ಅವಧಿಗೂ ಮುನ್ನವೇ ಜಲಾಶಯ ಭರ್ತಿಯಾಗಿತ್ತು. ಈ ಭಾಗದ ರೈತರು ಎರಡು ಬೆಳೆ ಬೆಳೆಯುವ ನಿರೀಕ್ಷೆಯಲ್ಲಿದ್ದರು. ಆದರೆ, ಅವರ ನಿರೀಕ್ಷೆ ಇಂದು ಹುಸಿಯಾಗಿದೆ. ಜಲಾಶಯದ 19ನೇ ಕ್ರಸ್ಟ್ ಗೇಟ್ ಕಳಚಿಕೊಂಡು ಹೋಗಿ ಅಪಾರ ಪ್ರಮಾಣದ ನೀರು ನದಿಗೆ ವ್ಯರ್ಥವಾಗಿ ಹರಿಯುತ್ತಿದೆ. ಇದರಿಂದಾಗಿ ರೈತರು ಆತಂಕಗೊಂಡಿದ್ದಾರೆ ಎಂದು ಹೇಳಿದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಈ ಘಟನೆಗೆ ಯಾರನ್ನು ಹೊಣೆಗಾರರನ್ನಾಗಿ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಜಲಾಶಯ ನಿರ್ವಹಣೆ ಮಾಡುವಲ್ಲಿ ಬೇಜವಾಬ್ದಾರಿ ವಹಿಸಿದ್ದರಿಂದಲೇ ಘಟನೆ ಜರುಗಿದೆ. ಎಂದರು.
ಇದನ್ನೂ ಓದಿ:ತುಂಗಭದ್ರಾ ಡ್ಯಾಂನಿಂದ 3.5ಲಕ್ಷ ಕ್ಯೂಸೆಕ್ ನೀರು ಬಿಟ್ಟರೆ ಏನೆಲ್ಲ ಅಪಾಯ; ಹೊಸ ಗೇಟ್ ಅಳವಡಿಕೆ ಯಾವಾಗ? - TB Dam Current Development