ಬೆಂಗಳೂರು:ನಗರದಲ್ಲಿ ಪಟಾಕಿ ನಿಯಮಾವಳಿ ಉಲ್ಲಂಘಿಸಿದವರ ವಿರುದ್ಧ ಅ.31 ರಿಂದ ನ.1ರ ವರೆಗೆ 56 ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಪಟಾಕಿ ಮಾರಾಟಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. 1,500ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ಈ ಪೈಕಿ 315 ಮಂದಿಗೆ ತಾತ್ಕಾಲಿಕವಾಗಿ ಪಟಾಕಿ ಮಾರಾಟಕ್ಕೆ ಪರವಾನಗಿ ನೀಡಲಾಗಿತ್ತು. ಆದರೆ, ಪರವಾನಗಿ ಪಡೆಯದ ಕೆಲವರು ರಸ್ತೆ ಬದಿ ಹಾಗೂ ತಳ್ಳುಗಾಡಿಗಳಲ್ಲಿ ಪಟಾಕಿ ಮಾರಾಟ ನಡೆಸುತ್ತಿರುವುದು ಕಂಡುಬಂದಿದೆ. ಅಂತಹವರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ.