ಬೆಂಗಳೂರು:ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ಚುರುಕುಗೊಳಿಸಿದೆ. ಶನಿವಾರ ಹೈದರಾಬಾದ್‌ನ ಎರಡು ಕಡೆ ಶೋಧ ನಡೆಸಿದ ಎಸ್ಐಟಿ ಅಧಿಕಾರಿಗಳು, ಹೈದರಾಬಾದ್‌ನ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋ–ಆಪರೇಟಿವ್ ಸೊಸೈಟಿ ಅಧ್ಯಕ್ಷನಾಗಿರುವ ಬಂಧಿತ ಆರೋಪಿ ಸತ್ಯನಾರಾಯಣ ವರ್ಮಾನಿಂದ 5 ಕೆ.ಜಿ ಹಾಗೂ ಕಾಕಿ ಶ್ರೀನಿವಾಸ್‌ರಿಂದ 1 ಕೆ.ಜಿ ಸಹಿತ ಒಟ್ಟು 6 ಕೆ.ಜಿ ಚಿನ್ನವನ್ನ ಜಪ್ತಿ ಮಾಡಿದ್ದಾರೆ. ಜೊತೆಗೆ ಬಿಲ್ಡರೊಬ್ಬರಿಂದ 2.50 ಕೋಟಿ ನಗದನ್ನು ಸಹ ಜಪ್ತಿ ಮಾಡಲಾಗಿದೆ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.
ಈ ಮೂಲಕ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳ ತಂಡ ಕಳೆದ ಎರಡು ದಿನಗಳಲ್ಲಿ 12 ಕೋಟಿ ರೂ ಮೌಲ್ಯದ ಒಟ್ಟು 16 ಕೆ.ಜಿ ಚಿನ್ನ ಜಪ್ತಿ ಮಾಡಿದಂತಾಗಿದೆ.