ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಸ್ನೇಹಿತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಸಾವಿಗೆ ಕಾರಣರಾಗಿದ್ದ 7 ಜನ ಆರೋಪಿಗಳನ್ನು ಕೆ.ಪಿ.ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕುಶಾಲ್ (24) ಎಂಬಾತನ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ಮಾಡಿ ಆತನ ಸಾವಿಗೆ ಕಾರಣರಾಗಿದ್ದ ಆರೋಪದಡಿ ಸಾಗರ್, ದಿಲೀಪ್, ಗಂಗಾಧರ್, ವಿಜಯ್, ಮಾದೇಶ್ ಹಾಗೂ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರನ್ನು ಬಂಧಿಸಲಾಗಿದೆ.
ಡಿಸೆಂಬರ್ 31ರಂದು ರಾತ್ರಿ ಕುಶಾಲ್ ಹಾಗೂ ಆರೋಪಿಗಳು ಭುವನೇಶ್ವರಿ ನಗರದ ಗಾಂಧಿ ಬ್ರಿಡ್ಜ್ ಬಳಿ ಮದ್ಯಪಾನ ಮಾಡಿದ್ದರು. ಆ ಸಂದರ್ಭದಲ್ಲಿ ಪಾನಮತ್ತನಾಗಿದ್ದ ಕುಶಾಲ್ ಆರೋಪಿಗಳ ಕೈಯಲ್ಲಿದ್ದ ಬಿಯರ್ ಬಾಟಲ್‌ಗಳನ್ನು ಪದೇ ಪದೆ ಕಿತ್ತುಕೊಳ್ಳುವ ಮೂಲಕ ಕಿರಿಕಿರಿಯುಂಟು ಮಾಡುತ್ತಿದ್ದ.