ಬೆಂಗಳೂರು:ಪಾನಮತ್ತರಾಗಿ ವಾಹನ ಚಾಲನೆ ಮಾಡುವವರು ಹಾಗೂ ಅತಿವೇಗದ ಚಾಲನೆ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ಕಳೆದ ಒಂದು ವಾರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. 60,903 ವಾಹನ ಚಾಲಕರನ್ನು ತಪಾಸಣೆ ನಡೆಸಿ ಒಟ್ಟೂ 769 ಪ್ರಕರಣಗಳನ್ನು ದಾಖಲಿಸಿದ್ದಾರೆ.
ಆರೋಪಿತ ಚಾಲಕರ ಡ್ರೈವಿಂಗ್ ಲೈಸೆನ್ಸ್ ರದ್ದುಗೊಳಿಸುವಂತೆ ಸಾರಿಗೆ ಇಲಾಖೆಗೆ ಪತ್ರ ಬರೆಯಲಾಗುವುದು. ಅದೇ ರೀತಿ ನಗರದಲ್ಲಿ ಅತಿ ವೇಗವಾಗಿ ವಾಹನ ಚಲಾಯಿಸುತ್ತಿದ್ದ 241 ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು 2.41 ಲಕ್ಷ ರೂ ದಂಡ ಸಂಗ್ರಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.