ಬೆಳಗಾವಿ: ಅಪಘಾತದಲ್ಲಿ ಎಂಟು ವರ್ಷದ ಬಾಲಕ ಸಾವನ್ನಪ್ಪಿದ್ದು, ಆತನ ಸಾವಿಗೆ ಕಾರಣನಾಗಿದ್ದ ಕಾರು ಚಾಲಕ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ಮೂಡಲಗಿ ತಾಲೂಕಿನ ನಾಗನೂರು ಗ್ರಾಮದಲ್ಲಿ ನಡೆದಿದೆ.
ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ವಿನಯ್ ಲಕ್ಷ್ಮಣ ಕೆಂಚನ್ನವರ (8) ಮೃತ ಬಾಲಕ. ನಾಗನೂರು ಗ್ರಾಮದ ಮುರಾರ್ಜಿ ವಸತಿ ಶಾಲೆ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿಯಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ತನ್ನದೇ ವಾಹನದಲ್ಲಿ ಖಾಸಗಿ ಆಸ್ಪತ್ರೆಗೆ ಚಾಲಕ ಕರೆತಂದಿದ್ದ. ಬಾಲಕನನ್ನು ಪರೀಕ್ಷಿಸಿದ್ದ ಖಾಸಗಿ ಆಸ್ಪತ್ರೆಯ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.