ಕರ್ನಾಟಕ

karnataka

ETV Bharat / state

ಪ್ರಧಾನಿ ಮೈಸೂರು ಆತಿಥ್ಯದ ವೆಚ್ಚ ₹80 ಲಕ್ಷವನ್ನು ರಾಜ್ಯ ಸರ್ಕಾರವೇ ಭರಿಸಲಿದೆ: ಸಚಿವ ಈಶ್ವರ ಖಂಡ್ರೆ - Eshwar Khandre - ESHWAR KHANDRE

ಹುಲಿ ಯೋಜನೆಗೆ 50 ವರ್ಷ ತುಂಬಿದ ಅಂಗವಾಗಿ ಕಳೆದ ವರ್ಷ ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ಮೋದಿ ಅವರ ಆತಿಥ್ಯದ ಬಿಲ್​ ಬಾಕಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಸಚಿವ ಈಶ್ವರ ಖಂಡ್ರೆ
ಸಚಿವ ಈಶ್ವರ ಖಂಡ್ರೆ (ETV Bharat)

By ETV Bharat Karnataka Team

Published : May 27, 2024, 3:12 PM IST

ಬೆಂಗಳೂರು: ಹುಲಿ ಯೋಜನೆಗೆ 50 ವರ್ಷ ತುಂಬಿದ ಅಂಗವಾಗಿ 2023ರ ಏಪ್ರಿಲ್​ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ಬಿಲ್ ಬಾಕಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ವಿಕಾಸಸೌಧದಲ್ಲಿ ಮಾತನಾಡಿದ ಅವರು, ಪ್ರಧಾನಿ, ರಾಷ್ಟ್ರಪತಿ ಮೊದಲಾದ ಗಣ್ಯರು ಆಗಮಿಸಿದಾಗ ಆತಿಥ್ಯ ನೀಡುವುದು ರಾಜ್ಯ ಸರ್ಕಾರದ ಸಂಪ್ರದಾಯವಾಗುತ್ತದೆ. ಆದರೆ ಕಳೆದ ವರ್ಷ ಏಪ್ರಿಲ್ ನಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿತ್ತು. ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ರಾಜ್ಯ ಸರ್ಕಾರ ಈ ಕಾರ್ಯಕ್ರಮದ ಆಯೋಜನೆಯಲ್ಲಿ ಯಾವುದೇ ಪಾತ್ರ ವಹಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಉಂಟಾಗಿರುವ ಗೊಂದಲ ನಿವಾರಿಸಲು ರಾಜ್ಯ ಸರ್ಕಾರವೇ ಮೈಸೂರಿನ ರಾಡಿಸನ್ ಬ್ಲೂ ಹೋಟೆಲ್​ ಬಿಲ್ ಬಾಕಿ ಪಾವತಿಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

2023ರ ಏಪ್ರಿಲ್​ನಲ್ಲಿ ನಡೆದ ಕಾರ್ಯಕ್ರಮವನ್ನು ಸಂಪೂರ್ಣವಾಗಿ ರಾಷ್ಟ್ರೀಯ ಹುಲಿ ಸಂರಕ್ಷಣೆ ಪ್ರಾಧಿಕಾರವೇ ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ಒಟ್ಟಾರೆ 6 ಕೋಟಿ 33 ಲಕ್ಷ ರೂ. ವೆಚ್ಚವಾಗಿದ್ದು, ಎನ್​ಟಿಸಿಎ. ರಾಜ್ಯಕ್ಕೆ 3 ಕೋಟಿ ರೂ. ಪಾವತಿಸಿದೆ. ಉಳಿದ ಹಣ ಪಾವತಿಸಿಲ್ಲ. ಹೀಗಾಗಿ ಮೈಸೂರಿನ ರಾಡಿಸನ್ ಬ್ಲೂ ಹೋಟೆಲ್​ ನವರು ಕಾರ್ಯಕ್ರಮದ ಆಯೋಜನೆಗೆ ಸ್ಥಳೀಯ ಬೆಂಬಲ ನೀಡಿದ್ದ ಅರಣ್ಯ ಇಲಾಖೆಗೆ ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರವೇ ಆತಿಥ್ಯದ 80 ಲಕ್ಷ ರೂ. ಹಣ ಪಾವತಿಸುವ ಮೂಲಕ ವಿವಾದಕ್ಕೆ ತೆರೆ ಎಳೆಯಲಿದೆ ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ:ಮೈಸೂರಿಗೆ ಬಂದಿದ್ದ ಪ್ರಧಾನಿ ಮೋದಿ ಆತಿಥ್ಯದ ಬಾಕಿ ಬಿಲ್ ಸೌಹಾರ್ದಯುತ ಇತ್ಯರ್ಥ: ಸಚಿವ ಈಶ್ವರ ಖಂಡ್ರೆ - Eshwar Khandre

ABOUT THE AUTHOR

...view details