ಬೆಂಗಳೂರು: ನಗರದ ಹೊರವಲಯದಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣದಲ್ಲಿ ವಶಕ್ಕೆ ಪಡೆದುಕೊಂಡಿದ್ದ 103 ಮಂದಿ ಪೈಕಿ 86 ಜನರು ಡ್ರಗ್ಸ್ ಸೇವನೆ ಮಾಡಿರುವುದು ದೃಢವಾಗಿದೆ. ಪಾರ್ಟಿಯಲ್ಲಿ ಭಾಗಿಯಾಗಿದ್ದ ತೆಲುಗು ನಟಿಯೋರ್ವರಿಂದ ಸಂಗ್ರಹಿಸಿದ್ದ ರಕ್ತದ ಮಾದರಿಯಲ್ಲಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ.
ಈ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ಬಹುತೇಕರು ಡ್ರಗ್ ಸೇವಿಸಿದ್ದರು ಎಂಬ ಆರೋಪವಿತ್ತು. 103 ಜನರ ಪೈಕಿ 86 ಮಂದಿಯ ರಕ್ತ ಪರೀಕ್ಷೆಯಲ್ಲಿ ಇದು ದೃಢವಾಗಿದೆ. 73 ಪುರುಷರಲ್ಲಿ 59 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದರೆ, 30 ಯುವತಿಯರ ಪೈಕಿ 27 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.