ಚಾಮರಾಜನಗರ: ಗ್ರಾಹಕರು ತಮ್ಮ ಖಾತೆಗಳಿಗೆ ಕಟ್ಟಿದ್ದ ಹಣವನ್ನು ಜಮೆ ಮಾಡದೇ ಲಕ್ಷಾಂತರ ರೂ. ಹಣ ಗುಳುಂ ಮಾಡಿರುವ ಆರೋಪ ಪ್ರಕರಣ ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿ ಎಸ್ಬಿಐ ಬ್ಯಾಂಕ್ನಲ್ಲಿ ನಡೆದಿದೆ.
ಬ್ಯಾಂಕ್ ಕ್ಯಾಷಿಯರ್ನಿಂದಲೇ ಗ್ರಾಹಕರಿಗೆ ಪಂಗನಾಮ: 26 ಲಕ್ಷ ಹಣ ಖಾತೆಗೆ ಜಮೆ ಮಾಡದ ಆರೋಪ - FIR Against Bank Cashier - FIR AGAINST BANK CASHIER
ಗ್ರಾಹಕರು ನೀಡಿದ್ದ ಹಣವನ್ನು ಖಾತೆಗಳಿಗೆ ಜಮೆ ಮಾಡದೇ ಎಸ್ಬಿಐ ಕ್ಯಾಷಿಯರ್ 26 ಲಕ್ಷ ರೂ. ಹಣವನ್ನು ಸ್ವಂತಕ್ಕೆ ಬಳಸಿಕೊಂಡಿರುವ ಆರೋಪ ಕೇಳಿಬಂದಿದೆ.
Published : Mar 23, 2024, 1:58 PM IST
|Updated : Mar 25, 2024, 4:19 PM IST
ಸಂತೇಮರಹಳ್ಳಿ ಶಾಖೆಯ ಎಸ್ಬಿಐ ಬ್ಯಾಂಕ್ನ ಕ್ಯಾಷ್ ಆಫೀಸರ್ ಮನೋರಂಜನ್ ಮುರ್ಮು ಎಂಬಾತ ಸ್ವಸಹಾಯ ಸಂಘಗಳ ಸಾಲ ಮರುಪಾವತಿ ಹಣವನ್ನು ಜಮೆ ಮಾಡದೇ ಗುಳುಂ ಮಾಡಿರುವ ಆರೋಪಿ. ಬರೋಬ್ಬರಿ 26,15,920 ರೂ. ಹಣವನ್ನು ಸ್ವಂತ ಬಳಕೆ ಮಾಡಿಕೊಂಡಿದ್ದಾನೆ ಎಂದು ಬ್ಯಾಂಕ್ ವ್ಯವಸ್ಥಾಪಕರು ದೂರು ಕೊಟ್ಟಿದ್ದಾರೆ. ವಿಕಾಸ ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಡಿ ಕೆಲವು ಸ್ವ-ಸಹಾಯ ಸಂಘಗಳು ಸಾಲ ಪಡೆದು ಸಾಲ ಮರುಪಾವತಿ ಮಾಡುತ್ತಿದ್ದರು. ಆದರೆ, ಹಣವನ್ನು ಖಾತೆಗಳಿಗೆ ಜಮೆ ಮಾಡದೇ ಕೌಂಟರ್ ಚಲನ್ ಅನ್ನು ಗ್ರಾಹಕರಿಗೆ ಕೊಟ್ಟು ಯಾಮಾರಿಸಿದ್ದಾನೆ ಎಂದು ದೂರು ಕೊಡಲಾಗಿದೆ. ಈ ಸಂಬಂಧ ಸಂತೇಮರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ:ಶಸ್ತ್ರಾಸ್ತ್ರ ಪರವಾನಗಿ ಹೊಂದಿರುವವರಲ್ಲಿ ಆರು ಜನ ರೌಡಿಗಳು ಪತ್ತೆ - arms license