ದೊಡ್ಡಬಳ್ಳಾಪುರ:ಬಿಎಂಟಿಸಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ನಗರದ ರೈಲ್ವೆ ಸ್ಟೇಷನ್ ಸರ್ಕಲ್ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಅಪಘಾತದಲ್ಲಿ ನಟರಾಜ್ (50) ಮೃತಪಟ್ಟಿದ್ದಾರೆ.
ಮೃತ ನಟರಾಜ್ ದೊಡ್ಡಬಳ್ಳಾಪುರ ತಾಲೂಕಿನ ಕೆಸ್ತೂರು ಗ್ರಾಮದವರು ಎಂದು ತಿಳಿದು ಬಂದಿದೆ. ಇಂದು ಬೆಳಗ್ಗೆ ದೊಡ್ಡಬಳ್ಳಾಪುರದಿಂದ ಬೆಂಗಳೂರಿಗೆ ಹೊರಟ್ಟಿದ್ದ ಬಸ್ ಹಾಗೂ ಬಾಶೆಟ್ಟಿಹಳ್ಳಿ ಕಡೆಯಿಂದ ದೊಡ್ಡಬಳ್ಳಾಪುರಕ್ಕೆ ಬರುತ್ತಿದ್ದ ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬಸ್ನ ಮುಂಭಾಗದಲ್ಲಿ ಬೈಕ್ ಸಿಲುಕಿಕೊಂಡಿತ್ತು.