ಕರ್ನಾಟಕ

karnataka

ETV Bharat / state

ಕಲಬುರಗಿ: ಅರಬೆತ್ತಲೆಗೊಳಿಸಿ ಯುವಕನ ಮೆರವಣಿಗೆ ಆರೋಪ: ದೂರು ದಾಖಲು

ಕಲಬುರಗಿಯಲ್ಲಿ ಯುವಕನೊಬ್ಬನನ್ನು ಅರೆಬೆತ್ತಲೆಗೊಳಿಸಿ ಮೆರವಣಿಗೆ ನಡೆಸಿದ ಆಘಾತಕಾರಿ ಘಟನೆ ನಡೆದಿದೆ.

ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

By ETV Bharat Karnataka Team

Published : Jan 27, 2024, 9:40 PM IST

Updated : Jan 27, 2024, 10:26 PM IST

ಕಲಬುರಗಿ: ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲು ಬರಲಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗಳ ಗುಂಪೊಂದು ಯುವಕನನ್ನು ಅರೆಬೆತ್ತಲೆಗೊಳಿಸಿ ಮೆರವಣಿಗೆ ನಡೆಸಿದ ಆಘಾತಕಾರಿ ಘಟನೆ ಜಿಲ್ಲೆಯ ವಿದ್ಯಾರ್ಥಿ ನಿಲಯವೊಂದರಲ್ಲಿ ನಡೆದಿದೆ. ಆರೋಪಿಗಳ ವಿರುದ್ಧ ಸಂತ್ರಸ್ತ ಯುವಕನ ತಂದೆ ಅಶೋಕನಗರ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಅನ್ವಯ ಐಪಿಸಿ ಸೆಕ್ಷನ್​ 341, 323, 504, 505(2) ಮತ್ತು 506 ಅಡಿ ಆರೋಪಿಗಳ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ಪೂಜೆಗೆ ಬಾರದ ಯುವಕನೊಂದಿಗೆ ಜಗಳ ತೆಗೆದ ಗುಂಪು, ಆತನನ್ನು ಹಿಗ್ಗಾಮುಗ್ಗಾ ಥಳಿಸಿದ್ದಲ್ಲದೇ ಅಂಬೇಡ್ಕರ್ ಪೋಟೋ ಕೊಟ್ಟು ಮೆರವಣಿಗೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹಾಸ್ಟೆಲ್‌ನಲ್ಲಿ ಪ್ರತಿ ಭಾನುವಾರ ಅಂಬೇಡ್ಕರ್​ ಅವರ ಚಿತ್ರಕ್ಕೆ ಪೂಜೆ ಸಲ್ಲಿಸುವ ಸಂಪ್ರದಾಯವಿದೆ. ಕಾರಣಾಂತರಗಳಿಂದ ಯುವಕನಿಗೆ ಪೂಜೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ. ಈ ವಿಚಾರ ತಿಳಿದ ಹಾಸ್ಟೆಲ್​ನ ಗುಂಪು, ಆತನ ಮೇಲೆ ಹಲ್ಲೆ ನಡೆಸಿದೆ ಎಂದು ಸಂತ್ರಸ್ತನ ತಂದೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

ಈ ಸಂಬಂಧ ಅವರು ಅಶೋಕ್​ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರಿನಲ್ಲಿ ವಿವರಿಸಿದ್ದಾರೆ. ಘಟನೆಯ ವಿಡಿಯೋವನ್ನು ಪೊಲೀಸರು ಪಡೆದುಕೊಂಡಿದ್ದು, ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಯುವಕನ ಸಂಬಂಧಿ ಅರೆಬೆತ್ತಲೆಗೊಳಿಸಿ ಥಳಿತ ಆರೋಪ: ಓಡಿ ಹೋಗಿದ್ದ ಜೋಡಿ ಎಸ್ಪಿಗೆ ಮೊರೆ

Last Updated : Jan 27, 2024, 10:26 PM IST

ABOUT THE AUTHOR

...view details