ಬೆಂಗಳೂರು :ಕೆಲಸದಿಂದ ತೆಗೆದುಹಾಕಲು ಕಾರಣನಾದ ಎಂದು ಸಹದ್ಯೋಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆೆ ಮಾಡಿರುವ ಘಟನೆ ಯಲಹಂಕ ನ್ಯೂಟೌನ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ. ಮೃತನನ್ನು ನೇಪಾಳ ಮೂಲದ ಗಜೇಂದ್ರ ಸೌದ್ (32) ಎಂದು ಗುರುತಿಸಲಾಗಿದೆ. ಆರೋಪಿ ಸಂತೋಷ್ ಪರಾರಿಯಾಗಿದ್ದು, ಆತನ ಪತ್ತೆಕಾರ್ಯ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂರು ವರ್ಷಗಳ ಹಿಂದೆ ಪತ್ನಿಯೊಂದಿಗೆ ಬೆಂಗಳೂರಿಗೆ ಬಂದಿದ್ದ ಗಜೇಂದ್ರ ಸೌದ್, ಹೋಟೆಲ್‌ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದ. ಅದೇ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಸಂತೋಷ್ ಹಾಗೂ ಗಜೇಂದ್ರ ಸೌದ್ ನಡುವೆ ಗಲಾಟೆಯಾಗುತ್ತಿದ್ದುದರಿಂದ ಸಂತೋಷ್ ಅನ್ನು ಕೆಲಸದಿಂದ ತೆಗೆದು ಹಾಕಲಾಗಿತ್ತು. ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಗಜೇಂದ್ರನ ಮನೆ ಬಳಿ ಬಂದಿದ್ದ ಸಂತೋಷ್, ಮಾತನಾಡಬೇಕು ಎಂದು ಆತನನ್ನ ಕರೆದುಕೊಂಡು ಹೋಗಿದ್ದ.