ಮಂಗಳೂರು:ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಸುಮಾರು 67.75 ಲ.ರೂ. ಮೌಲ್ಯದ ಚಿನ್ನಾಭರಣವಿದ್ದ ಹ್ಯಾಂಡ್‌ಬ್ಯಾಗ್ ಕಳ್ಳತನವಾಗಿರುವ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯೊಬ್ಬರು ನಗರದ ಬ್ಯಾಂಕ್‌ನ ಲಾಕರ್‌ನಲ್ಲಿದ್ದ 110 ಗ್ರಾಂ ತೂಕದ ವಜ್ರದ ಹರಳುಗಳ ಜೊತೆ ನಾನಾ ನಮೂನೆಯ ಚಿನ್ನಾಭರಣಗಳನ್ನು ಕೌಟುಂಬಿಕ ಕಾರ್ಯಕ್ರಮದ ಹಿನ್ನೆಲೆ ಮನೆಗೆ ತಂದಿದ್ದರು. ಇದನ್ನು ಹ್ಯಾಂಡ್ಬ್ಯಾಗ್ನಲ್ಲಿ ಹಾಕಿ ಜೂ.19ರಂದು ಬೆಳಗ್ಗೆ 7 ಗಂಟೆಗೆ ಮಂಗಳೂರಿನಿಂದ ಕೆಎಸ್‌ಆರ್‌ಟಿಸಿ ಐರಾವತ ಬಸ್‌ನಲ್ಲಿ ಬೆಂಗಳೂರಿಗೆ ಪ್ರಯಾಣಿಸಿದ್ದರು.
ಹಾಸನ ತಲುಪಿದಾಗ ಅವರ ಹ್ಯಾಂಡ್ ಬ್ಯಾಗ್ ಪರಿಶೀಲಿಸಿದ್ದರು. ಈ ವೇಳೆ ಬ್ಯಾಗ್ನಲ್ಲಿಟ್ಟಿದ್ದ ಚಿನ್ನಾಭರಣಗಳು ಮಾಯವಾಗಿದ್ದವು. ಮಂಗಳೂರು - ಹಾಸನ ನಡುವೆ ಅವರ ಪಕ್ಕದಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ನಡು ವಯಸ್ಸಿನ ಮಹಿಳೆ ಕಳ್ಳತನ ಮಾಡಿರುವ ಶಂಕೆ ಇದೆ ಎಂದು ಚಿನ್ನಾಭರಣ ಕಳೆದುಕೊಂಡ ಮಹಿಳೆ ಜುಲೈ 1ರಂದು ಉರ್ವ ಪೊಲೀಸರಿಗೆ ದೂರು ನೀಡಿದ್ದಾರೆ.