ವಿಜಯಪುರ:ಅಕ್ರಮ ಸಂಬಂಧದ ಸಂಶಯದ ಹಿನ್ನೆಲೆಯಲ್ಲಿ ಜೋಡಿ ಕೊಲೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದಲ್ಲಿ ನಿನ್ನೆ (ಸೋಮವಾರ) ತಡರಾತ್ರಿ ನಡೆದಿದೆ. ಇಂದು (ಮಂಗಳವಾರ) ಬೆಳಗಿನಜಾವ ಬೆಳಕಿಗೆ ಬಂದಿದೆ.
ಗಣಿ ಗ್ರಾಮದ ಸೋಮನಿಂಗಪ್ಪ ಕಲ್ಲಪ್ಪ ಕುಂಬಾರ (35) ಹಾಗೂ ಪಾರ್ವತಿ ತಳವಾರ (38) ಕೊಲೆಗೀಡಾದ ಜೋಡಿ ಎಂದು ಗುರುತಿಸಲಾಗಿದೆ. ಗಣಿ ಗ್ರಾಮಕ್ಕೆ ಬರುವ ಮೊದಲೇ ಇಬ್ಬರನ್ನೂ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎನ್ನುವ ಮಾಹಿತಿ ಪ್ರಾಥಮಿಕ ತನಿಖೆಯಿಂದ ಲಭ್ಯವಾಗಿದೆ. ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಈ ಜೋಡಿ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ನಿಡಗುಂದಿ ಠಾಣೆ ಪೊಲೀಸರು ಭೇಟಿ, ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಯಾರು ಮಾಡಿದ್ದಾರೆ ಮತ್ತು ಕೊಲೆಗೆ ಸಂಬಂಧಿಸಿದಂತೆ ನಿಖರ ಕಾರಣ ಪತ್ತೆ ಹಚ್ಚಲು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.