ಚಿಕ್ಕೋಡಿ(ಬೆಳಗಾವಿ):ತಡರಾತ್ರಿ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ ಐದು ಮನೆಗಳು ಹಾಗೂ ಒಂದು ಅಂಗಡಿ ಸಂಪೂರ್ಣ ಸುಟ್ಟಿರುವ ಘಟನೆ ಸಂಭವಿಸಿದೆ. ರಾತ್ರಿ ಒಂದು ಗಂಟೆ ಆಸುಪಾಸಿನಲ್ಲಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದಲ್ಲಿ ಇರುವ ಮನೆಗಳಿಗೂ ಹಬ್ಬಿ ಇಷ್ಟೊಂದು ನಷ್ಟಕ್ಕೆ ಕಾರಣವಾಗಿದೆ.
ಚಿಕ್ಕೋಡಿ ಅಂಕಲಿ ಗ್ರಾಮದಲ್ಲಿ ಅಗ್ನಿ ಅವಘಡ: ಐದು ಮನೆಗಳು ಒಂದು ಅಂಗಡಿ ಭಸ್ಮ - ಬೆಳಗಾವಿ
ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಒಂದು ಅಂಗಡಿಗೆ ಬೆಂಕಿ ತಗುಲಿದ ಪರಿಣಾಮ 5 ಮನೆಗಳು ಸುಟ್ಟು ಕರಕಲಾಗಿರುವ ಘಟನೆ ತಡರಾತ್ರಿ ನಡೆದಿದೆ.
Published : Feb 7, 2024, 8:23 AM IST
|Updated : Feb 7, 2024, 1:02 PM IST
ಘಟನಾ ಸ್ಥಳಕ್ಕೆ ಚಿಕ್ಕೋಡಿ ಅಗ್ನಿಶಾಮಕ ಸಿಬ್ಬಂದಿಗಳು ಬಂದು ನಾಲ್ಕು ಫೈರ್ ಎಂಜಿನ್ಗಳ ಮೂಲಕ ಯಶಸ್ವಿಯಾಗಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿದಾನಂದ ಮೇದಾರ ಮತ್ತು ಮಹಾದೇವ ಮೇದಾರ ಕುಟುಂಬಕ್ಕೆ ಸೇರಿದ 5 ಮನೆಗಳು ಮತ್ತು ದತ್ತಾತ್ರೇಯ ಪರಿಟ್ ಅವರಿಗೆ ಸೇರಿದ ಅಂಗಡಿ ಸಂಪೂರ್ಣ ಭಸ್ಮವಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಸ್ಥಳಕ್ಕೆ ಚಿಕ್ಕೋಡಿ ಡಿವೈಎಸ್ಪಿ ಗೋಪಾಲ ಗೌಡರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಾವ ಕಾರಣಕ್ಕೆ ಬೆಂಕಿ ತಗುಲಿದೆ ಎಂಬುದು ನಿಖರವಾಗಿ ತಿಳಿದು ಬಂದಿಲ್ಲ. ಸದ್ಯ ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಪತ್ನಿ ಓಡಿ ಹೋಗಲು ಸಾಥ್ ನೀಡಿದ್ದ ಸ್ನೇಹಿತನ ಹತ್ಯೆ: ಆರೋಪಿ ಬಂಧನ