ಬೆಂಗಳೂರು:ಟೂರಿಸ್ಟ್ ವೀಸಾದಡಿ ನಗರಕ್ಕೆ ಬಂದಿದ್ದ ವಿದೇಶಿ ಮಹಿಳೆ ಶವವಾಗಿ ಪತ್ತೆಯಾಗಿದ್ದಾರೆ. ಶೇಷಾದ್ರಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಜಗದೀಶ್ ಹೋಟೆಲ್ನಲ್ಲಿ ಉಳಿದುಕೊಂಡಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಉಜೇಕಿಸ್ತಾನ್ ಮೂಲದ ಜರೀನಾ ಮೃತ ಮಹಿಳೆ ಎಂದು ಗುರುತಿಸಲಾಗಿದೆ.
ಪ್ರವಾಸಿ ವೀಸಾದಡಿ ಬೆಂಗಳೂರಿಗೆ ಬಂದಿದ್ದ ಜರೀನಾ, ಕಳೆದ ನಾಲ್ಕು ದಿನಗಳಿಂದ ಜಗದೀಶ್ ಹೋಟೆಲ್ನಲ್ಲಿ ತಂಗಿದ್ದರು. ನಿನ್ನೆ ಸಂಜೆಯಿಂದ ಹೋಟೆಲ್ ಸಿಬ್ಬಂದಿಗೆ ಅವರು ಪ್ರತಿಕ್ರಿಯಿಸಿರಲಿಲ್ಲ. ಅನುಮಾನಗೊಂಡು ರೂಮ್ನ ಮಾಸ್ಟರ್ ಕೀ ಬಳಸಿ ಬಾಗಿಲು ತೆರೆದು ಒಳ ನೋಡಿದಾಗ ಮಹಿಳೆ ಶವವಾಗಿ ಪತ್ತೆಯಾಗಿದ್ದಾರೆ.