ಕರ್ನಾಟಕ

karnataka

ETV Bharat / state

ಸ್ನೇಹಿತರಿಂದಲೇ ಸಾಮೂಹಿಕ ಅತ್ಯಾಚಾರ: ಮೈಸೂರಲ್ಲಿ ದೂರು ದಾಖಲಿಸಿದ ಯುವತಿ - GANG RAPE

ಮೈಸೂರಲ್ಲಿ ಯುವತಿ ಮೇಲೆ ಆಕೆಯ ಸ್ನೇಹಿತರಿಂದಲೇ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಗ್ಯಾಂಗ್ ರೇಪ್ ಪ್ರಕರಣ
ಗ್ಯಾಂಗ್ ರೇಪ್ ಪ್ರಕರಣ (IANS)

By ETV Bharat Karnataka Team

Published : Nov 4, 2024, 8:19 PM IST

Updated : Nov 4, 2024, 10:48 PM IST

ಮೈಸೂರು:ಯುವತಿಯ ಮೇಲೆ ಸ್ನೇಹಿತರೇ ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಈ ಕುರಿತು ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕಳೆದ ಶನಿವಾರ ರಾತ್ರಿ ಇಬ್ಬರು ಸ್ನೇಹಿತರೊಂದಿಗೆ ಖಾಸಗಿ ಹೋಟೆಲ್‌ನಲ್ಲಿ ಪಾರ್ಟಿಗೆ ತೆರಳಿದ್ದು, ಪಾರ್ಟಿಯ ಬಳಿಕ ಇಬ್ಬರು ಸ್ನೇಹಿತರು ನನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಇಂದು ಪೊಲೀಸ್ ಠಾಣೆಗೆ ಹಾಜರಾಗಿ ನೀಡಿರುವ ದೂರಿನಲ್ಲಿ ಸಂತ್ರಸ್ತ ಯುವತಿ ಆರೋಪಿಸಿದ್ದಾರೆ. ಮೈಸೂರಿನ ಖಾಸಗಿ ಕಂಪೆನಿಯಲ್ಲಿ ಯುವತಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ಯುವತಿ ನೀಡಿದ ದೂರಿನ ಮೇರೆಗೆ ವಿಜಯ ನಗರ ಪೊಲೀಸರು, ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕಳೆದ ಮೂರು ವರ್ಷಗಳ ಹಿಂದೆ ಮೈಸೂರಿನ ಹೊರವಲಯದಲ್ಲಿ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಇಡೀ ದೇಶವೇ ಬೆಚ್ಚಿ ಬೀಳಿಸಿತ್ತು. ಇದೀಗ ಮೈಸೂರಲ್ಲಿ ಮತ್ತೊಂದು ಗ್ಯಾಂಗ್ ರೇಪ್ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಹುಬ್ಬಳ್ಳಿಯಲ್ಲಿ ಅಪ್ರಾಪ್ತೆ ಜೊತೆ ಅನುಚಿತ ವರ್ತನೆ ಆರೋಪ: ಹೆಡ್​ಕಾನ್ಸ್​ಟೇಬಲ್ ವಿರುದ್ಧ ಪೋಕ್ಸೋ ಪ್ರಕರಣ

Last Updated : Nov 4, 2024, 10:48 PM IST

ABOUT THE AUTHOR

...view details