ದಾವಣಗೆರೆ: ಖಾಸಗಿ ಶಾಲೆಗೆ ನುಗ್ಗಿ ಹಣಕ್ಕೆ ಬೇಡಿಕೆ ಇಟ್ಟು ಅದೇ ಶಾಲೆಯ ಮಾಲೀಕನಿಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಹಿಂದೂ ಜನಜಾಗೃತಿ ಸಂಘಟನೆ ಅಧ್ಯಕ್ಷನನ್ನು ಪೋಲಿಸರು ಬಂಧಿಸಿದ್ದಾರೆ. ಹಿಂದೂ ಜನ ಜಾಗೃತಿ ಸೇನಾ ಸಮಿತಿ ಸಂಘಟನೆಯ ಅಧ್ಯಕ್ಷ ಚೇತನ್ ಬಂಧಿತ.
ಚೇತನ್ ತನ್ನ ಸಹಚರರೊಂದಿಗೆ ಸೇರಿಕೊಂಡು ದಾವಣಗೆರೆ ನಗರದ ಕರೂರು ಕೈಗಾರಿಕಾ ಪ್ರದೇಶದಲ್ಲಿರುವ ಸೈಯದ್ ಅಕ್ಬರ್ ಅಲಿ ಎಂಬುವರಿಗೆ ಸೇರಿದ ಸ್ಕೂಲ್ಗೆ ತೆರಳಿ ಅನಧಿಕೃತವಾಗಿ ಕೈಗಾರಿಕಾ ಪ್ರದೇಶದಲ್ಲಿ ಶಾಲೆ ನಡೆಸುತ್ತಿದ್ದೀರಿ ಎಂದು ಬೆದರಿಕೆ ಹಾಕಿದ್ದಾನೆ. ಜೊತೆಗೆ ಶಾಲೆಯ ವಿರುದ್ಧ ಶಿಕ್ಷಣ ಇಲಾಖೆಗೆ ಸಲ್ಲಿಸಿದ ದೂರು ಹಿಂಪಡೆಯಬೇಕಾದರೆ 5 ಲಕ್ಷ ಹಣ ಕೊಡಿ ಎಂದು ಶಾಲೆಯ ಮಾಲೀಕನಿಗೆ ಬೇಡಿಕೆ ಇಟ್ಟಿದ್ದನ್ನು. ಹಣ ಕೊಡದಿದ್ದರೆ ಶಾಲೆ ಮುಚ್ಚಿಸುವ ಬೆದರಿಕೆ ಹಾಕಿದ್ದ ಎಂದು ದೂರು ದಾಖಲಾಗಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಾಲೆಯ ಮಾಲೀಕ ಸೈಯದ್ ಅಕ್ಬರ್ ಅಲಿಯಬೆ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಚೇತನ್ ವಿರುದ್ಧ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡು ಪ್ರಮುಖ ಆರೋಪಿಯಾದ ಚೇತನ್ (28) ಎಂಬುವರನ್ನ ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಅಂದು ಕೃತ್ಯಕ್ಕೆ ಬಳಕೆ ಮಾಡಿದ್ದ 15,000 ರೂ ಬೆಲೆ ಬಾಳುವ ಮೊಬೈಲ್, ಸ್ಕೂಟರ್ ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಆರೋಪಿ ಚೇತನ್ ಇದೇ ಪ್ರಕರಣದಂತೆ ಇತರ ಕಡೆಗಳಲ್ಲಿ ಭಾಗಿಯಾಗಿರುವ ಬಗ್ಗೆ ಇನ್ನೂ ಹೆಚ್ಚಿನ ತನಿಖೆ ಮುಂದುವರೆದಿದೆ.