ರಾಯಚೂರು :ಮೊಹರಂ ಹಬ್ಬದ ಆಚರಣೆ ವೇಳೆ ಕೆಂಡ ಹಾಯುವಾಗ ವ್ಯಕ್ತಿಯೊಬ್ಬ ಆಯಾತಪ್ಪಿ ಕೊಂಡಕ್ಕೆ ಬಿದ್ದು, ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಮಸ್ಕಿ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಹೊಕ್ರಾಣಿ ಗ್ರಾಮದ ನಿವಾಸಿ ಯಮನಪ್ಪ ನಾಯಕ್ (45) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಇಲ್ಲಿ ಮುಸ್ಲಿಮರ ಪವಿತ್ರ ಹಬ್ಬವನ್ನು ಆಚರಿಸಲಾಗುತ್ತದೆ. ಮೊಹರಂ ಆಚರಣೆ ವೇಳೆ ದೇವರು ಹೊತ್ತವರು ಅಗ್ನಿ ಹಾಯುವ ಸಂಪ್ರದಾಯವಿದೆ. ದೇವರಲ್ಲಿ ಬೇಡಿಕೆ ಈಡೇರಿಕೆಗಾಗಿ ಕೆಲವರು ಬೆಂಕಿ ಹಾಯುತ್ತಾರೆ. ಹೀಗೆ ಬೆಂಕಿ ಹಾಯುವ ಸಮಯದಲ್ಲಿ ಕೊಂಡಕ್ಕೆ ಆಯಾ ತಪ್ಪಿ ಬಿದ್ದ ವ್ಯಕ್ತಿಯೊಬ್ಬರು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದ್ದಾರೆ.