ಬೆಂಗಳೂರು:ಮುಂಜಾನೆ ವಾಕಿಂಗ್‌ಗೆ ಹೋಗುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಕೋಣನಕುಂಟೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸುರೇಶ್ (25) ಬಂಧಿತ ಆರೋಪಿ.
ಆಗಸ್ಟ್ 2ರಂದು ಮುಂಜಾನೆ ಕೋಣನಕುಂಟೆ ಬಳಿಯ ಕೃಷ್ಣಾ ನಗರದಲ್ಲಿ ವಾಕಿಂಗ್‌ಗೆ ಹೋಗುತ್ತಿದ್ದ ಉತ್ತರ ಭಾರತ ಮೂಲದ ಮಹಿಳೆಯೊಬ್ಬರನ್ನು ಆರೋಪಿಯು ಬಲವಂತವಾಗಿ ತಬ್ಬಿ, ಲೈಂಗಿಕ ಕಿರುಕುಳ ನೀಡಿದ್ದ. ಆರೋಪಿಯ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.
ಮಹಿಳೆಯು ಪ್ರತಿದಿನ ಬೆಳಿಗ್ಗೆ 5 ಗಂಟೆಗೆ ಸ್ನೇಹಿತೆಯರೊಂದಿಗೆ ವಾಕಿಂಗ್ ಹೋಗುತ್ತಿದ್ದರು. ಶುಕ್ರವಾರ ಮುಂಜಾನೆ ತನ್ನ ಸ್ನೇಹಿತೆಯರಿಗಾಗಿ ಕಾಯುತ್ತಿದ್ದಾಗ ದಿಢೀರ್ ಬಂದಿದ್ದ ಆರೋಪಿ, ಹಿಂಬದಿಯಿಂದ ಮಹಿಳೆಯ ಕೈಹಿಡಿದು, ತನ್ನ ಒಂದು ಕೈಯಿಂದ ಆಕೆಯ ಬಾಯಿ ಮುಚ್ಚಿದ್ದಾನೆ. ಈ ವೇಳೆ ಮಹಿಳೆ ತಪ್ಪಿಸಿಕೊಂಡು ಹೋಗಲು ಪ್ರಯತ್ನಿಸಿದರೂ ಸಹ ಆಕೆಯನ್ನು ಹಿಂಬಾಲಿಸಿ ತಬ್ಬಿಕೊಂಡು ಅಸಭ್ಯವಾಗಿ ವರ್ತಿಸಿದ್ದ.