ಶಿವಮೊಗ್ಗ:ರಸ್ತೆಯಲ್ಲಿ ಸ್ನೇಹಿತರೊಂದಿಗೆ ಮಾತನಾಡುತ್ತಿದ್ದ ನಿಂತಿದ್ದ ವ್ಯಕ್ತಿಯ ಮೇಲೆ ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್ನಿಂದ ಹೊಡೆದು ಕೊಂದು ಹಾಕಿರುವ ಘಟನೆ ಬಾಪೂಜಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದ ಸಮೀಪ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಸುರೇಶ್ ಅಲಿಯಾಸ್ ಸೂರಿ(45) ಎಂದು ಗುರುತಿಸಲಾಗಿದೆ.
ಇಬ್ಬರು ದುಷ್ಕರ್ಮಿಗಳು ಹಿಂದಿನಿಂದ ಬಂದು ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಸುರೇಶ್ ರಸ್ತೆಯಲ್ಲಿಯೇ ಬಿದ್ದು ಒದ್ದಾಡಿದ್ದಾರೆ. ತಲೆಯಿಂದ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿದರು ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಈ ಹಿಂದೆ ಸುರೇಶ್ ಅಪರಾಧ ಕೃತ್ಯದಲ್ಲಿ ಭಾಗಿಯಾದ್ದ ಕಾರಣಕ್ಕೆ ಕಾರಾಗೃಹ ವಾಸ ಅನುಭವಿಸಿ, ಹೊರಬಂದು ಕೇವಲ 20 ದಿನಗಳಾಗಿತ್ತು. ಈ ಕೊಲೆ ಪ್ರಕರಣ ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ನಡೆದಿರುವ ಶಂಕೆ ವ್ಯಕ್ತವಾಗಿದೆ.