ಕರ್ನಾಟಕ

karnataka

ETV Bharat / state

ಧಾರವಾಡ ಬಸ್​ ನಿಲ್ಸಾಣದಲ್ಲಿ ವ್ಯಕ್ತಿ ಆತ್ಮಹತ್ಯೆ: ಸಿಸಿಟಿವಿ ಪರಿಶೀಲನೆ ಬಳಿಕ ಘಟನೆ ಬೆಳಕಿಗೆ - A MAN DIES

ಧಾರವಾಡ ಕೇಂದ್ರೀಯ ಬಸ್​ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Dharwad Central Bus Stand
ಧಾರವಾಡ ಕೇಂದ್ರೀಯ ಬಸ್​ ನಿಲ್ದಾಣ (ETV Bharat)

By ETV Bharat Karnataka Team

Published : Jan 21, 2025, 2:27 PM IST

Updated : Jan 21, 2025, 2:44 PM IST

ಧಾರವಾಡ : ಧಾರವಾಡ ಕೇಂದ್ರೀಯ ಬಸ್ ‌ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು ಆತನ ಗುರುತು ಪತ್ತೆಯಾಗಿಲ್ಲ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮೊದಲು ಪೊಲೀಸರು ಪಾದಚಾರಿ ಮೇಲೆ ಬಸ್ ‌ಹರಿದಿದೆ ಎಂದು ತಿಳಿದಿದ್ದರು. ಆದರೆ, ಸಿಸಿಟಿವಿ ಪರಿಶೀಲನೆ ಬಳಿಕ ವ್ಯಕ್ತಿಯೇ ಆತ್ಮಹತ್ಯೆ ಮಾಡಿಕೊಂಡಿರುವುದು ಬಯಲಾಗಿದೆ. ಧಾರವಾಡ ಉಪನಗರ ಠಾಣೆಗೆ ಕೇಸ್ ವರ್ಗಾವಣೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಹೆಸರು ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ರೈಲ್ವೆ ಹಳಿಗೆ ಬಿದ್ದು, ಯುವಕ ಆತ್ಮಹತ್ಯೆ ಶಂಕೆ : ರೈಲ್ವೆ ಹಳಿಯಲ್ಲಿ ಯುವಕನೋರ್ವನ ದೇಹ ಎರಡು ತುಂಡಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹುಬ್ಬಳ್ಳಿಯ ಉಣಕಲ್‌‌ನ ಎಪಿಎಂಸಿ ಬಳಿಯ ರೈಲ್ವೆ ಹಳ್ಳಿಯಲ್ಲಿ ನಡೆದಿದೆ. ವ್ಯಕ್ತಿಯ ಮೃತದೇಹ‌ ನೋಡಿದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.‌

ಮೃತನನ್ನು ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ನಾಗರಾಜ್ ಸಿದ್ದಪ್ಪ ಬಾರಕೇರ್ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ಉಣಕಲ್‌ನ ಎಪಿಎಂಸಿ ಬಳಿಯ ಹೆಬ್ಬಳ್ಳಿ ಸಂಪರ್ಕ ಕಲ್ಪಿಸುವ ರಸ್ತೆಯ ರೈಲ್ವೆ ಹಳಿಯಲ್ಲಿ‌ ಯುವಕನ ಶವ ಪತ್ತೆಯಾಗಿದೆ.

ಸ್ಥಳೀಯರ ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಹುಬ್ಬಳ್ಳಿ ರೈಲ್ವೆ ಪೊಲೀಸರು ಭೇಟಿ‌ ನೀಡಿದ್ದು, ಸದ್ಯ ಈಗ‌ ಸ್ಥಳೀಯರ ಸಹಕಾರದೊಂದಿಗೆ ಯುವಕನ‌ ಮೃತದೇಹ‌ ಆಸ್ಪತ್ರೆಗೆ ರವಾನಿಸಿದ್ದಾರೆ.‌ ಈ ಕುರಿತಂತೆ ಹುಬ್ಬಳ್ಳಿ‌ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿರುವುದಾಗಿ ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ :ಮಂಗಳೂರು: ಗುಂಡು ಹಾರಿಸಿ ಪತ್ನಿ ಕೊಲೆಗೈದು ವ್ಯಕ್ತಿ ಆತ್ಮಹತ್ಯೆ - MAN KILLED WIFE

Last Updated : Jan 21, 2025, 2:44 PM IST

ABOUT THE AUTHOR

...view details