ಮಂಗಳೂರು:ರಾಷ್ಟ್ರಿಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಬೆಂಕಿಗೆ ಆಹುತಿಯಾಗಿರುವ ಘಟನೆ ಸುರತ್ಕಲ್ ಎನ್ಐಟಿಕೆ ಹಳೆ ಟೋಲ್ ಗೇಟ್ ಬಳಿ ಇಂದು ಬೆಳಗ್ಗೆ ನಡೆದಿದೆ.
ಸುರತ್ಕಲ್ ಎನ್ಐಟಿಕೆ ಬಳಿ ಸಂಚರಿಸುತ್ತಿದ್ದ ಕಾರಿಗೆ ಬೆಂಕಿ: ಸುಟ್ಟು ಕರಕಲಾದ ವಾಹನ - A moving car caught fire - A MOVING CAR CAUGHT FIRE
ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು, ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯವಾಗಿಲ್ಲ.
Published : Sep 5, 2024, 1:38 PM IST
|Updated : Sep 5, 2024, 4:39 PM IST
ಬಿಎಂಡಬ್ಲ್ಯೂ ಕಂಪನಿಯ ಕಾರು ಸುಟ್ಟು ಕರಕಲಾದ ಕಾರು. ಕಾರು ಉಡುಪಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಮಂಗಳೂರು ಕಡೆ ತೆರಳುತ್ತಿತ್ತು. ಎನ್ಐಟಿಕೆಯ ಬಳಿ ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಬೆಂಕಿ ಅವಘಡದಲ್ಲಿ ಯಾರಿಗೂ ಅಪಾಯವಾಗಿಲ್ಲ. ಮಂಗಳೂರು ಉತ್ತರ ಸಂಚಾರ ಪೊಲೀಸರು, ಸುರತ್ಕಲ್ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಶ್ರಮಿಸಿದರು.
ಇದನ್ನೂ ಓದಿ:ತುಮಕೂರು: ಪಟಾಕಿ ಅಂಗಡಿಯಲ್ಲಿ ಬೆಂಕಿ ಅನಾಹುತ - Firecracker Shop Gutted