ಹುಬ್ಬಳ್ಳಿ:ಹುಬ್ಬಳ್ಳಿಯ ಬಿವಿಬಿ ಕಾಲೇಜು ಮುಂದಿನ ಬಿಆರ್‌ಟಿಎಸ್ ರಸ್ತೆಯಲ್ಲಿ ಹೆಬ್ಬಾವು ಕಾಣಿಸಿಕೊಂಡಿತ್ತು. ಹೆಬ್ಬಾವು ಕಂಡು ಭಯಭೀತರಾದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಉರಗ ತಜ್ಞ ಶಿವು ಅವರಿಗೆ ಕರೆ ಮಾಡಿ ತಿಳಿಸಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಉರಗ ತಜ್ಞ ಶಿವು ಹೆಬ್ಬಾವನ್ನು ರಕ್ಷಣೆ ಮಾಡಿದರು.
ಹುಬ್ಬಳ್ಳಿ ಬಿಆರ್‌ಟಿಎಸ್ ಕಾರಿಡಾರಿನಲ್ಲಿ ಹೆಬ್ಬಾವು ಪ್ರತ್ಯಕ್ಷ: ಉರಗ ತಜ್ಞನಿಂದ ರಕ್ಷಣೆ
ಬಿಆರ್‌ಟಿಎಸ್ ರಸ್ತೆಯಲ್ಲಿ ನಿನ್ನೆ ರಾತ್ರಿ ಹೆಬ್ಬಾವೊಂದು ಪ್ರತ್ಯಕ್ಷವಾಗಿ ಸಾರ್ವಜನಿಕರನ್ನು ತಬ್ಬಿಬ್ಬುಗೊಳಿಸಿತ್ತು.
ಹುಬ್ಬಳ್ಳಿ ಬಿಆರ್‌ಟಿಎಸ್ ಕಾರಿಡಾರಿನಲ್ಲಿ ಹೆಬ್ಬಾವು: ಉರಗ ತಜ್ಞನಿಂದ ರಕ್ಷಣೆ (ETV Bharat)
Published : Nov 3, 2024, 3:42 PM IST
ಹಾವು ಗೋಣಿಚೀಲದ ಒಳಗೆ ಹೋಗುತ್ತಿದ್ದಂತೆ ಅಲ್ಲಿ ನೆರೆದಿದ್ದ ಜನ ಉರಗ ತಜ್ಞ ಶಿವು ಅವರಿಗೆ ಚಪ್ಪಾಳೆ ಮೂಲಕ ಅಭಿನಂದಿಸಿದರು. ಸುರಕ್ಷಿತವಾಗಿ ಹೆಬ್ಬಾವನ್ನು ತೆಗೆದುಕೊಂಡು ಹೋಗಲಾಯಿತು. ಹಾವು ಹಿಡಿಯುವ ವಿಡಿಯೋ ಸಖತ್ ವೈರಲ್ ಆಗಿದೆ.
ಇದನ್ನೂ ಓದಿ:ರಸ್ತೆ ದಾಟುತ್ತಿದ್ದ ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ: ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ