ಕರ್ನಾಟಕ

karnataka

ETV Bharat / state

ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ: ದಾವಣಗೆರೆಯಲ್ಲಿ ಇಬ್ಬರು ಬೈಕ್ ಸವಾರರು ಸಾವು - tipper collided with a two wheeler

ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಟಿಪ್ಪರ್​ ಡಿಕ್ಕಿ ಹೊಡೆದು ಇಬ್ಬರು ಬೈಕ್​ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ: ಇಬ್ಬರು ಬೈಕ್ ಸವಾರರ ಸಾವು
ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ: ಇಬ್ಬರು ಬೈಕ್ ಸವಾರರ ಸಾವು

By ETV Bharat Karnataka Team

Published : Mar 17, 2024, 1:39 PM IST

ದಾವಣಗೆರೆ:ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ನಡೆಯಿತು. ದಾವಣಗೆರೆ ತಾಲ್ಲೂಕಿನ ಬಾತಿ ಗ್ರಾಮ ರಾಕೇಶ್ (22), ಆಕಾಶ್ (23) ಮೃತರು. ಟಿಪ್ಪರ್ ಲಾರಿ ಚಾಲಕನ ಅಜಾಗರೂಕತೆಯ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.‌

ಯುವಕರಿಬ್ಬರ ಮೃತದೇಹಗಳನ್ನು ಹರಿಹರ ತಾಲ್ಲೂಕಾಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ಹರಿಹರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details