ಶಿವಮೊಗ್ಗ: ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತೀರ್ಥಹಳ್ಳಿ ತಾಲೂಕಿನಲ್ಲಿ ಇಂದು ನಡೆಯಿತು. ಕೋಣಂದೂರು ಸಮೀಪದ ದೇಮ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಪಗಾರಿನ ಜಯಂತ್ ಭಟ್(64) ಮೃತರು. ಜಯಂತ್ ಭಟ್ ಕೋಣಂದೂರಿನಿಂದ ಮನೆಗೆ ಹೋಗುವಾಗ ಗಾಳಿಸಹಿತ ಮಳೆಗೆ ಅಕೇಶಿಯಾ ಮರ ಬಿದ್ದಿದೆ.
ಸ್ಥಳಕ್ಕೆ ಕೋಣಂದೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಗುಂಬೆ ಘಾಟ್‌ನಲ್ಲಿ ಟ್ರಾಫಿಕ್ ಜಾಮ್:ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಮರ ಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿತು. ಘಾಟಿಯ ಮೂರನೇ ತಿರುವಿನಲ್ಲಿ ಮರ ಬುಡಮೇಲಾಗಿ ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ವಿಷಯ ತಿಳಿದು ಪೊಲೀಸರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತೆರವು ಕಾರ್ಯಾಚರಣೆ ನಡೆಸಿದರು.
ಇದನ್ನೂ ಓದಿ:ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆ; ಕೊಪ್ಪಳದಲ್ಲಿ ಸಿಡಿಲಿಗೆ ವ್ಯಕ್ತಿ ಬಲಿ - Heavy Rain With Thunder