ಕರ್ನಾಟಕ

karnataka

ETV Bharat / state

ಉಡುಪಿ: ರೈಲ್ವೆ ಹಳಿ ಮೇಲೆ ಬಿದ್ದ ಮರ: ಲೋಕೋ ಪೈಲಟ್​ಗಳ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ - Disaster Missed

ರೈಲ್ವೆ ಹಳಿ ಮೇಲೆ ಮರ ಬಿದ್ದಿದ್ದು, ಲೋಕೋ ಪೈಲಟ್​ಗಳ ಸಮಯ ಪ್ರಜ್ಞೆಯಿಂದ ಸಂಭವಿಸಬೇಕಾಗಿದ್ದ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ.

RAILWAY TRACK  LOCO PILOTS  UDUPI
ಲೋಕೋ ಪೈಲಟ್​ಗಳ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ (ETV Bharat)

By ETV Bharat Karnataka Team

Published : Jul 24, 2024, 4:32 PM IST

ಉಡುಪಿ:ಲೋಕೋ ಪೈಲಟ್​ಗಳ ಸಕಾಲಿಕ ತುರ್ತು ಕ್ರಮದಿಂದ ಇಂದು ಬೆಳಗ್ಗೆ ಮುಂಬಯಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಮತ್ಸ್ಯಗಂಧ ಎಕ್ಸ್​ಪ್ರೆಸ್ ರೈಲು ದೊಡ್ಡ ದುರಂತದಿಂದ ಪಾರಾದ ಘಟನೆ ಬಾರಕೂರು - ಉಡುಪಿ ನಿಲ್ದಾಣಗಳ ನಡುವೆ ನಡೆದಿರುವ ಬಗ್ಗೆ ವರದಿಯಾಗಿದೆ.

ಉಡುಪಿ ರೈಲ್ವೇ ನಿಲ್ದಾಣ (ETV Bharat)

ಕೊಂಕಣ ರೈಲು ಮಾರ್ಗದಲ್ಲಿ ಬಾರಕೂರು ಹಾಗೂ ಉಡುಪಿ ನಿಲ್ದಾಣಗಳ ನಡುವೆ ಬೆಳಗ್ಗೆ 9:18ಕ್ಕೆ ಮಣಿಪಾಲದ ಪೆರಂಪಳ್ಳಿ ಬಳಿ ದೊಡ್ಡ ಮರವೊಂದು ಭಾರಿ ಮಳೆಯಿಂದ ಹಳಿಗೆ ಅಡ್ಡವಾಗಿ ಬಿದ್ದಿರುವುದನ್ನು ರೈಲಿನ ಲೋಕೋ ಪೈಲಟ್​ಗಳು ತೀರಾ ಸಮೀಪದಲ್ಲಿ ಗಮನಿಸಿದ್ದರು. ತಕ್ಷಣವೇ ಅವರು ಎಮರ್ಜೆನ್ಸಿ ಬ್ರೇಕ್ ಬಳಸಿ ರೈಲು ನಿಲ್ಲಿಸುವಲ್ಲಿ ಯಶಸ್ವಿಯಾದರು. ಹಳಿಯಲ್ಲಿ ಬಿದ್ದ ಮರ ಪೈಲಟ್​ಗಳ ಗಮನಕ್ಕೆ ಬರುವುದು ಸ್ವಲ್ಪ ತಡವಾಗಿದ್ದರೂ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಲೋಕೋ ಪೈಲಟ್​ಗಳ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ (ETV Bharat)

ತಕ್ಷಣವೇ ಸ್ಥಳಕ್ಕೆ ಧಾವಿಸಿ ಬಂದ ಒಎಚ್ಇ ತಂಡದವರು ಮರವನ್ನು ಹಳಿಯಿಂದ ತೆಗೆದು ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಸಕಾಲಿಕ ಕ್ರಮದಿಂದ ದೊಡ್ಡ ಅನಾಹುತ ತಪ್ಪಿಸಿದ ಜಾಗೃತ ಮಂಡ್ಯ ಮತ್ತು ಭಟ್ಕಳದ ಲೋಕೊ ಪೈಲಟ್ ಮತ್ತು ಸಹಾಯಕ ಪೈಲಟ್​ಗೆ ಕೊಂಕಣ ರೈಲ್ವೆಯ ಸಿಎಂಡಿ ಸಂತೋಷ್ ಕುಮಾರ್ ಝಾ ಅವರು ತಲಾ 15,000 ರೂ. ಬಹುಮಾನವನ್ನು ಘೋಷಿಸಿದ್ದರು. ಸುರತ್ಕಲ್ ನಿಲ್ದಾಣದಲ್ಲಿ ಬಹುಮಾನದ ಚೆಕ್ ಅನ್ನು ಹಸ್ತಾಂತರಿಸಲಾಯಿತು ಎಂದು ಕೊಂಕಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

ಓದಿ:ಜಮ್ಮು ಕಾಶ್ಮೀರದ ಕುಪ್ವಾರದಲ್ಲಿ ಗುಂಡಿನ ಚಕಮಕಿ; ಓರ್ವ ಉಗ್ರನ ಹತ್ಯೆ - Kupwara Encounter

ABOUT THE AUTHOR

...view details