ಹಾಸನ :ರೀಲ್ಸ್ ಮಾಡಲು ಬೆಟ್ಟದ ತುದಿಯಲ್ಲಿ ನಿಂತ ಯುವಕ ಆಯತಪ್ಪಿ ಪ್ರಪಾತಕ್ಕೆ ಬಿದ್ದು ಗಾಯಗೊಂಡ ಘಟನೆ ಸಕಲೇಶಪುರ ತಾಲೂಕಿನ ಗವಿಬೆಟ್ಟದಲ್ಲಿ ನಡೆದಿದೆ. ರಾಕಿದ್ (18) ನೂರು ಅಡಿಗೂ ಹೆಚ್ಚು ಆಳದ ಪ್ರಪಾತಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡ ಯುವಕ.
ಶನಿವಾರಸಂತೆಯಿಂದ ತನ್ನ ಇಬ್ಬರು ಸ್ನೇಹಿತರೊಂದಿಗೆ ಸಕಲೇಶಪುರದ ಗವಿಬೆಟ್ಟಕ್ಕೆ ಬಂದಿದ್ದ ರಾಕಿದ್, ಬೆಟ್ಟದ ತುದಿಯಲ್ಲಿ ನಿಂತು ರೀಲ್ಸ್ ಮಾಡುತ್ತಿದ್ದ ವೇಳೆ ಜಾರಿ ಬಿದ್ದ ಪರಿಣಾಮ ಆತನ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.