ಕರ್ನಾಟಕ

karnataka

ETV Bharat / state

ಮಂಡ್ಯ: ಕಂಟೈನರ್​ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ, 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ - Mandya Road Accident

ಮಂಡ್ಯ ಹೊರವಲಯದಲ್ಲಿ ಕಂಟೈನರ್​ಗೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದು ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಕಂಟೈನರ್​ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಬಸ್
ಕಂಟೈನರ್​ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಬಸ್ (ETV Bharat)

By ETV Bharat Karnataka Team

Published : Sep 30, 2024, 1:12 PM IST

ಮಂಡ್ಯ: ನಿಂತಿದ್ದ ಕಂಟೈನರ್​ಗೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯ ಹೊರವಲಯದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಸ್ಯಾಂಜೋ ಆಸ್ಪತ್ರೆ ಬಳಿ ಇಂದು ಬೆಳಗ್ಗೆ ನಡೆಯಿತು.

ಕುಣಿಗಲ್‌-ಹೆಬ್ಬರು-ತುಮಕೂರು ನಡುವೆ ಸಂಚರಿಸುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಕಂಟೈನರ್​ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿರುವುದರಿಂದ ಹೆಚ್ಚಿನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಯಾಂಜೋ ಆಸ್ಪತ್ರೆ ಹಾಗೂ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಂಡ್ಯ ಬಳಿ ಕಂಟೈನರ್​ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ (ETV Bharat)

ಮಂಡ್ಯದ ಗ್ರಾಮಾಂತರ ಪೊಲೀಸ್‌ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಅಪಘಾತದ ದೃಶ್ಯ ಹೆದ್ದಾರಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕುಣಿಗಲ್​ನಿಂದ ಬೆಂಗಳೂರ - ಮೈಸೂರು ಹೆದ್ದಾರಿಯಲ್ಲಿ ಬಂದ ಬಸ್ ಸ್ಯಾಂಜೋ ಆಸ್ಪತ್ರೆಯ ಬಳಿ ಸರ್ವಿಸ್ ರಸ್ತೆಗೆ ತಿರುವು ತೆಗೆದುಕೊಳ್ಳುವಾಗ ರಸ್ತೆ ಬದಿ ನಿಂತಿದ್ದ ಕಂಟೈನರ್​ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪಲ್ಟಿಯಾಗಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಪಲ್ಟಿಯಾದ ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರು ಹೊರ ಬರಲಾಗದೇ ಕಿಟಕಿಗಳಿಂದ ಹೊರಬಂದಿದ್ದಾರೆ. ಬಳಿಕ ಸ್ಥಳಕ್ಕೆ ಪೊಲೀಸರು ಆಗಮಿಸಿ, ತೆರವು ಕಾರ್ಯ ನಡೆಸಿದರು.

ಇದನ್ನೂ ಓದಿ: ದೇವರ ಉತ್ಸವದಲ್ಲಿ ಡ್ಯಾನ್ಸ್ ಮಾಡುತ್ತಿದ್ದಾಗ ಹೃದಯಾಘಾತ, ವ್ಯಕ್ತಿ ಸಾವು - Man Dies Of Heart Attack

ABOUT THE AUTHOR

...view details