ಬೆಂಗಳೂರು: ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಬಳಿ ಹಾದು ಹೋಗಿರುವ ಯಲಹಂಕ ಹಾಗೂ ಹಿಂದೂಪುರ ರಾಜ್ಯ ಹೆದ್ದಾರಿಯಲ್ಲಿ ಕಾರು ಮತ್ತು ತೈಲ ಸಾಗಾಟದ ಟ್ಯಾಂಕರ್ ನಡುವೆ ಸೋಮವಾರ ಭೀಕರ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ.
ಮೃತರನ್ನು ಕೊಣನಕುಂಟೆಯ ವಸಂತ್, ಆವಲಹಳ್ಳಿಯ ಚೇತನ್ ಎಂದು ಗುರುತಿಸಲಾಗಿದೆ. ಕಿರಣ್ ಸೇರಿದಂತೆ ಮತ್ತೊಬ್ಬ ಯುವಕ ಗಾಯಗೊಂಡಿದ್ದಾರೆ.
ದೊಡ್ಡಬಳ್ಳಾಪುರದ ಬಳಿ ಭೀಕರ ರಸ್ತೆ ಅಪಘಾತ (ETV Bharat) ಗೌರಿಬಿದನೂರು ಕಡೆಯಿಂದ ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ದೊಡ್ಡಬಳ್ಳಾಪುರ ಕಡೆಯಿಂದ ಬಂದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಚಾಲಕ ಹಾಗೂ ಹಿಂಬದಿ ಕುಳಿತಿದ್ದ ಯುವಕ ಸಾವನ್ನಪ್ಪಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಡ್ರಗ್ಸ್ ಚಟಕ್ಕೆ ಒಳಗಾಗಿದ್ದ ಪುತ್ರನಿಗೆ ಬೈದು ಬುದ್ಧಿ ಹೇಳಿದ್ದಕ್ಕೆ ತಂದೆ ಎದೆಗೆ ಇರಿದು ಕೊಂದ!