ಕರ್ನಾಟಕ

karnataka

ETV Bharat / state

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ: ಇಬ್ಬರ ಬಂಧನ - Valmiki Development Corporation Scam - VALMIKI DEVELOPMENT CORPORATION SCAM

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಎಸ್​ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

accused-arrested-by-sit
ಸಾಂದರ್ಭಿಕ ಚಿತ್ರ (ETV Bharat)

By ETV Bharat Karnataka Team

Published : Jun 5, 2024, 9:07 PM IST

Updated : Jun 6, 2024, 12:17 PM IST

ಬೆಂಗಳೂರು:ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಅವ್ಯವಹಾರ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು ಮತ್ತಿಬ್ಬರನ್ನು ಬಂಧಿಸಿ, ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ. ಪ್ರಕರಣದಲ್ಲಿ ಈವರೆಗೂ ಐವರನ್ನು ಬಂಧಿಸಿದಂತಾಗಿದೆ.

ನೆಕ್ಕುಂಟಿ ನಾಗರಾಜ್, ಇವರ ಸ್ನೇಹಿತ ನಾಗೇಶ್ ಎಂಬುವರನ್ನು ಬಂಧಿಸಲಾಗಿದ್ದು, ಪೊಲೀಸ್ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಸೇರಿದ್ದ 94.73 ಕೋಟಿ ರೂ.ಗಳನ್ನು ಯೂನಿಯನ್ ಬ್ಯಾಂಕ್ ಖಾತೆಗಳ ಮೂಲಕ ಅಕ್ರಮವಾಗಿ ವರ್ಗಾಯಿಸಲು ನಾಗರಾಜ್ ಹಾಗೂ ನಾಗೇಶ್ ಸಂಚು ಹೂಡಿರುವ ಆರೋಪವಿದೆ.

ಅಕ್ರಮದ ಹಿಂದೆ ಕೈವಾಡವಿರುವುದಾಗಿ ನಾಗರಾಜ್ ತಿಳಿದುಬಂದಿದೆ. ಪ್ರಕರಣದಲ್ಲಿ ತೆಲಂಗಾಣದ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ (FFCCSL) ಅಧ್ಯಕ್ಷ ಇ‌. ಸತ್ಯನಾರಾಯಣ್ ಎಂಬವರನ್ನು ಬಂಧಿಸಿ ಜೂ.12ರವರೆಗೆ ಹೆಚ್ಚಿನ ಕಸ್ಟಡಿಗೆ ಪಡೆಯಲಾಗಿದೆ.

ಪ್ರಕರಣದ ತನಿಖೆ ವೇಳೆ ಎಫ್ಎಫ್​ಸಿಎಲ್​​ 18 ಖಾತೆಗಳಿಗೆ ಸುಮಾರು 94.73 ಕೋಟಿ ರೂ. ಜಮೆ ಆಗಿರುವ ಸಂಗತಿಯನ್ನು ಪತ್ತೆ ಹಚ್ಚಿರುವ ಎಸ್ಐಟಿ ಅಧಿಕಾರಿಗಳು ವಿಚಾರಣೆ ಚುರುಕುಗೊಳಿಸಿದ್ದಾರೆ. ಹೈದರಾಬಾದ್‌ನ ಸತ್ಯನಾರಾಯಣ್ ಹಣ ಅಕ್ರಮ ವರ್ಗಾವಣೆ ಕೃತ್ಯದಲ್ಲಿ ಭಾಗಿಯಾಗಿರುವುದರ ಕುರಿತು ಪುರಾವೆಗಳು ಲಭ್ಯವಾಗಿರುವುದರಿಂದ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ವಾಲ್ಮೀಕಿ ನಿಗಮದ ಅಕ್ರಮ: ಹೈದರಾಬಾದ್ ಮೂಲದ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಅರೆಸ್ಟ್​ - Valmiki Development Corporation Case

Last Updated : Jun 6, 2024, 12:17 PM IST

ABOUT THE AUTHOR

...view details