ಬೆಂಗಳೂರು:ರಾಜಧಾನಿಯ ಚಾಮರಾಜಪೇಟೆಯ ವಿನಾಯಕನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದಿದ್ದ ಆರೋಪಿಯನ್ನು ಕಾಟನ್ ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಿಹಾರದ ಚಂಪಾರಣ್ ಜಿಲ್ಲೆಯ ಶೇಕ್ ನಸ್ರು (30) ಬಂಧಿತ ಆರೋಪಿ. ರಸ್ತೆ ಬದಿ ಶೆಡ್‌ನಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಘಟನೆ ಚಾಮರಾಜಪೇಟೆಯ ವಿನಾಯಕನಗರದಲ್ಲಿ ಭಾನುವಾರ ಬೆಳಗ್ಗಿನ ಜಾವ ನಡೆದಿತ್ತು.
ಹಸುಗಳ ಮಾಲೀಕ ನೀಡಿದ ದೂರಿನ ಅನ್ವಯ ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 325 (ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ) ಕಾಯ್ದೆಯಡಿ ಕಾಟನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ಇದನ್ನೂ ಓದಿ:ಬೆಂಗಳೂರಿನಲ್ಲಿ ಹಸುಗಳ ಕೆಚ್ಚಲು ಕೊಯ್ದ ಪಾಪಿಗಳು! ರಸ್ತೆಯಲ್ಲಿ ರಕ್ತದೋಕುಳಿ, ಮೂಕಪ್ರಾಣಿಗಳ ನರಳಾಟಕ್ಕೆ ಸ್ಥಳೀಯರ ಕಣ್ಣೀರು
ಆರೋಪಿ ಶೇಕ್ ನಸ್ರು ಘಟನಾ ಸ್ಥಳದಿಂದ 50 ಮೀಟರ್ ದೂರದಲ್ಲಿದ್ದ ಪ್ಲಾಸ್ಟಿಕ್ ಹಾಗೂ ಬಟ್ಟೆಯ ಬ್ಯಾಗ್‌ಗಳನ್ನು ಹೊಲಿಯುವ ಅಂಗಡಿಯಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಮದ್ಯದ ಅಮಲಿನಲ್ಲಿ ದುಷ್ಕೃತ್ಯ ಎಸಗಿರುವುದು ತನಿಖೆ ವೇಳೆ ತಿಳಿದುಬಂದಿದೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಜನವರಿ 24ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಎಸ್. ಗಿರೀಶ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಹಸುಗಳ ಕೆಚ್ಚಲು ಕೊಯ್ದ ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಶಿಕ್ಷೆ: ಸಿಎಂ ಸಿದ್ದರಾಮಯ್ಯ
ಇದನ್ನೂ ಓದಿ:ಹಸುಗಳ ಕೆಚ್ಚಲು ಕೊಯ್ದವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಕರಾಳ ಸಂಕ್ರಾಂತಿ ಆಚರಣೆ : ಆರ್.ಅಶೋಕ್