ಕರ್ನಾಟಕ

karnataka

By ETV Bharat Karnataka Team

Published : Mar 4, 2024, 6:46 PM IST

Updated : Mar 4, 2024, 7:37 PM IST

ETV Bharat / state

ಪಾಕಿಸ್ತಾನ್​​ ಪರ ಘೋಷಣೆ ಕೂಗಿದ ಆರೋಪ: ಮೂವರ ಬಂಧನ

ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಪ್ರಕರಣದ ಸಂಬಂಧ ಮೂವರನ್ನು ಬಂಧಿಸಲಾಗಿದೆ.

Etv Bharat
Etv Bharat

ಬೆಂಗಳೂರು: ವಿಧಾನಸೌಧ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ದೆಹಲಿ ಮೂಲದ ಇಲ್ತಾಜ್, ಆರ್.ಟಿ.ನಗರದ ಮುನಾವರ್ ಹಾಗೂ ಹಾವೇರಿಯ ಬ್ಯಾಡಗಿಯ ಮೊಹಮದ್ ಶಫಿ ನಾಶಿ ಪುಡಿ ಎಂಬುವರನ್ನ ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.

ಪ್ರಕರಣ ಸಂಬಂಧ ಮೂವರನ್ನ ಬಂಧಿಸಿ ವಿಚಾರಣೆ ನಡೆಸಿದ್ದೇವೆ ಎಂದು ಕೇಂದ್ರ ವಿಭಾಗ ಡಿಸಿಪಿ ಶೇಖರ್ ಹೆಚ್.ಟಿ ಖಚಿತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ನಗರ ಕೇಂದ್ರ ವಿಭಾಗದ ಪೊಲೀಸರು, ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನ ಬಂಧಿಸಲಾಗಿದೆ. ಎಫ್ ಎಸ್ ಎಲ್ ವರದಿ, ಸಾಂಧರ್ಬಿಕ ಸಾಕ್ಷ್ಯಗಳು ಹಾಗೂ ತನಿಖೆ ವೇಳೆ ಸಿಕ್ಕ ಸಾಕ್ಷ್ಯಗಳ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಸದ್ಯ ಆರೋಪಿಗಳನ್ನು ಬಂಧಿಸಿ ವೈದ್ಯಕೀಯ ಪರೀಕ್ಷೆಗೆ‌ ಒಳಪಡಿಸಿದ ಬಳಿಕ ಕೋರಮಂಗಲದಲ್ಲಿರುವ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗುವುದು ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಆರೋಪ: ಸೊಮೊಟೊ ಪ್ರಕರಣ ದಾಖಲು

ಕಳೆದ ತಿಂಗಳು ಫೆ.27 ರಂದು ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದಿದ್ದ ನಾಸೀರ್ ಹುಸೇನ್ ಪರ ಬೆಂಬಲಿಗರು ವಿಧಾನಸೌಧ ಆವರಣದಲ್ಲಿ ಜೈಕಾರ ಕೂಗಿದ್ದರು. ಈ ವೇಳೆ, ಪಾಕಿಸ್ತಾನ್ ಪರ ಘೋಷಣೆ ಕೂಗಲಾಗಿದೆ ಎಂದು ಆರೋಪಿಸಿ ವಿರೋಧ ಪಕ್ಷಗಳು ಸದನದಲ್ಲಿ ಧರಣಿ ನಡೆಸಿದ್ದರು. ಅಲ್ಲದೇ ಈ ಕುರಿತು ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು ನೀಡಿತ್ತು‌. ಎಫ್ಎಸ್​​ಎಲ್ ವರದಿಯಲ್ಲಿ ಪಾಕಿಸ್ತಾನ ಪರ ಕೂಗಿರುವುದು ಸಾಬೀತಾದರೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಸಮರ್ಥಿಸಿಕೊಂಡಿತ್ತು.

Last Updated : Mar 4, 2024, 7:37 PM IST

ABOUT THE AUTHOR

...view details