ಬೆಂಗಳೂರು:ಮದ್ಯದ ಅಮಲಿನಲ್ಲಿ ವ್ಯಕ್ತಿಯ ತಲೆಗೆ ಹೊಡೆದು ಹತ್ಯೆ ಮಾಡಿರುವ ಘಟನೆ ಕೋಣನಕುಂಟೆ ಠಾಣಾ ವ್ಯಾಪ್ತಿಯ ಕೊತ್ತನೂರು ಸಮುದಾಯ ಭವನದ ಬಳಿ ನಡೆದಿದೆ. ನೇಪಾಳ ಮೂಲದ ಬಾಲಾಜಿ (43) ಹತ್ಯೆಯಾದ ವ್ಯಕ್ತಿ. ಕೃತ್ಯದ ಬಳಿಕ ಇಬ್ಬರು ಆರೋಪಿಗಳು ನಾಪತ್ತೆಯಾಗಿದ್ದಾರೆ.
ದಿನಗೂಲಿ ಕೆಲಸ ಮಾಡಿಕೊಂಡಿದ್ದ ಬಾಲಾಜಿ ಹಾಗೂ ಇಬ್ಬರು ವ್ಯಕ್ತಿಗಳು ತಡರಾತ್ರಿ ಮದ್ಯಪಾನ ಮಾಡಿದ್ದರು. ಈ ವೇಳೆ ಪರಸ್ಪರ ಗಲಾಟೆ ಮಾಡಿಕೊಂಡು ಬಾಲಾಜಿಯನ್ನು ಹತ್ಯೆಗೈದಿರುವ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಕೋಣನಕುಂಟೆ ಠಾಣಾ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.