ಬಳ್ಳಾರಿ:ಪಂಚನಾಮೆ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಪೋಕ್ಸೋ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಏನಿದು ಪ್ರಕರಣ?: ಆರೋಪಿಯನ್ನು ಮಂಜುನಾಥ್ನನ್ನು ಸದ್ಯ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ (ವಿಮ್ಸ್) ದಾಖಲಿಸಲಾಗಿದೆ. ಆರೋಪಿ ಮಂಜುನಾಥ್ ಇತ್ತೀಚೆಗೆ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ತಲೆಮರೆಸಿಕೊಂಡಿದ್ದನು. ಪೊಲೀಸರು ಆರೋಪಿಯನ್ನು ಬುಧವಾರ ರಾತ್ರಿ ತೋರಣಗಲ್ಲಿನಲ್ಲಿ ಬಂಧಿಸಿದ್ದರು.