ಕರ್ನಾಟಕ

karnataka

ETV Bharat / state

ಚಿಕ್ಕೋಡಿ: ಮತ ಎಣಿಕೆ ವೇಳೆ ಪಾಕ್​​ ಪರ ಘೋಷಣೆ ಆರೋಪ, ಆರೋಪಿ ಬಂಧನ: ಸಚಿವ ಸತೀಶ್​ ಜಾರಕಿಹೊಳಿ ಪ್ರತಿಕ್ರಿಯೆ - Pro Pak slogan - PRO PAK SLOGAN

ಲೋಕಸಭಾ ಚುನಾವಣೆ ಮತ ಎಣಿಕೆ ವೇಳೆ ಪಾಕ್​ ಪರ ಘೋಷಣೆ ಕೂಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

PRO PAK SLOGAN
ಆರೋಪಿ (ETV Bharat)

By ETV Bharat Karnataka Team

Published : Jun 5, 2024, 9:11 AM IST

Updated : Jun 5, 2024, 9:32 AM IST

ಚಿಕ್ಕೋಡಿ:ಲೋಕಸಭಾ ಚುನಾವಣೆ ಫಲಿತಾಂಶ ಹೊರ ಬೀಳುವ ಮುನ್ನ, ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಮುನ್ನಡೆ ಸಾಧಿಸುತ್ತಿದ್ದಂತೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಎದುರಿಸುತ್ತಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕೋಡಿಯ ನಿಪ್ಪಾಣಿ - ಮುದೋಳ ರಾಜ್ಯ ಹೆದ್ದಾರಿ ಪಕ್ಕದಲ್ಲಿನ ಮತ ಎಣಿಕೆ ಕೇಂದ್ರದ ಬಳಿ ಘಟನೆ ನಡೆದಿದೆ.

ಪಾಕಿಸ್ತಾನ ಕಿ ಜೈ ಎಂಬ ಘೋಷಣೆ ಕೂಗಿದ ಆರೋಪದ ಮೇಲೆ ಜಮೀರ್​ ಸಿಕಂದರ್​ ನಾಯಿಕವಾಡಿ (25) ಎಂಬುವನನ್ನು ಚಿಕ್ಕೋಡಿ ಪೊಲೀಸರು ಬಂಧನ ಮಾಡಿದ್ದಾರೆ. ಮತ ಎಣಿಕೆ ನಡೆಯುತ್ತಿದ್ದ ಆರ್.ಡಿ.ಕಾಲೇಜಿನ ಎದುರಿನಲ್ಲಿ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಪರವಾಗಿ ಘೋಷಣೆ ಕೂಗಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಪೊಲೀಸರು ತಡರಾತ್ರಿ ಆರೋಪಿಯನ್ನು ಬಂಧಿಸಿದ್ದಾರೆ.

'ಪಾಕಿಸ್ತಾನ್​ ಕಿ ಜೈ' ಅಂತಾ ಘೋಷಣೆ ಕೂಗಿದ ಆರೋಪದ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕಲಂ 295 (ಎ), 505(2) ಐಪಿಸಿ ಅಡಿ ಪ್ರಕರಣ ದಾಖಲಾಗಿದೆ.

ಸಚಿವ ಸತೀಶ್​ ಜಾರಕಿಹೊಳಿ ಪ್ರತಿಕ್ರಿಯೆ:ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ, ಈ ಕುರಿತು ಪೊಲೀಸರು ತನಿಖೆ ಮಾಡುತ್ತಾರೆ, ಸದ್ಯ ಆರೋಪಿಯನ್ನು ಬಂಧನ ಮಾಡಿದ್ದಾರೆ, ದೇಶ ವಿರೋಧಿ ಘೋಷಣೆ ಯಾರೆ ಕೂಗಿದರು ಅದು ತಪ್ಪು. ನಾವು ಖಂಡನೆ ವ್ಯಕ್ತಪಡಿಸುತ್ತೇವೆ ಎಂದು ಸಚಿವ ಸತೀಶ್​ ಜಾರಕಿಹೊಳಿ ಹೇಳಿದ್ದಾರೆ.

ಇದನ್ನೂ ಓದಿ:ಪ್ರವೀಣ್​ ನೆಟ್ಟಾರು ಹತ್ಯೆ ಕೇಸ್: ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿ ಸೆರೆ - Praveen Nettaru Murder Case

Last Updated : Jun 5, 2024, 9:32 AM IST

ABOUT THE AUTHOR

...view details