ತುಮಕೂರು:ಪೊಲೀಸ್ ಠಾಣೆಯಿಂದಲೇ ಪರಾರಿಯಾಗಿದ್ದ ಬಂಧಿತ ಕಳ್ಳತನ ಪ್ರಕರಣದ ಆರೋಪಿ ಸೈಯದ್‌ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಆರೋಪಿ ಸಿಕ್ಕಿಬಿದ್ದಿದ್ದಾನೆ. ಈತನಿಗಾಗಿ ಕಳೆದ ಎರಡು ದಿನದಿಂದ ಶೋಧ ನಡೆಸಲಾಗುತ್ತಿತ್ತು.
ಸೈಯದ್‌ನನ್ನು ಬೆಂಗಳೂರಿನಲ್ಲಿ ಬಂಧಿಸಿ ಗುಬ್ಬಿ ಠಾಣೆಗೆ ಕರೆತರಲಾಗಿತ್ತು. ಶುಕ್ರವಾರ ಬೆಳಿಗ್ಗೆ 4:30ಕ್ಕೆ ಗುಬ್ಬಿ ಠಾಣೆಯಿಂದ ಪರಾರಿಯಾಗಿದ್ದ. ಗದಗ ಜಿಲ್ಲೆಯ ಹುಲ್ಲೂರು ಗ್ರಾಮದ ನಿವಾಸಿಯಾದ ಈತ ಡ್ಯಾನ್ಸ್ ಕೋರಿಯಾಗ್ರಾಫರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದನು.