ಬೆಂಗಳೂರು: ರೈಲಿನಲ್ಲಿ ಪ್ರಯಾಣಿಕರ ಲ್ಯಾಪ್‌ಟಾಪ್‌ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಳಗಾವಿ ಮೂಲದ ಭೀಮಪ್ಪ ದುಂಡಪ್ಪ ಬೀರಾಜ (19) ಎಂದು ಗುರುತಿಸಲಾಗಿದೆ. ಆರೋಪಿಯು ಫೆಬ್ರವರಿ 1ರಂದು ಘಟಪ್ರಭಾದಿಂದ ಬೆಂಗಳೂರಿಗೆ ಬರುತ್ತಿದ್ದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ಮಲಗಿದ್ದಾಗ ಅವರ ಲ್ಯಾಪ್‌ಟಾಪ್ ಮತ್ತಿತರ ವಸ್ತುಗಳನ್ನು ಕಳ್ಳತನ ಮಾಡಿದ್ದ. ಈ ಕುರಿತು ಅರಸಿಕೆರೆ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬೆಂಗಳೂರು: ರೈಲಿನಲ್ಲಿ ಪ್ರಯಾಣಿಕರ ವಸ್ತುಗಳನ್ನು ಕದಿಯುತ್ತಿದ್ದ ಆರೋಪಿ ಬಂಧನ - ರೈಲಿನಲ್ಲಿ ಕಳ್ಳತನ
ರೈಲು ಪ್ರಯಾಣಿಕರ ಲ್ಯಾಪ್‌ಟಾಪ್ ಕದಿಯುತ್ತಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನಿಂದ ವಿವಿಧ ಕಂಪೆನಿಗಳ 10 ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
Published : Feb 13, 2024, 1:12 PM IST
ಫೆಬ್ರವರಿ 6ರಂದು ಬೆಳಗಿನ ಜಾವ ಬೀರೂರು ರೈಲ್ವೆ ನಿಲ್ದಾಣದಲ್ಲಿ ವೇಟಿಂಗ್ ಹಾಲ್ನಲ್ಲಿ ಕುಳಿತಿದ್ದ ಆರೋಪಿಯನ್ನು ಗಮನಿಸಿದ್ದ ರೈಲ್ವೆ ಪೊಲೀಸರು ಅನುಮಾನಗೊಂಡು ವಶಕ್ಕೆ ಪಡೆದಿದ್ದರು. ವಿಚಾರಿಸಿದಾಗ ಕಳ್ಳತನ ಪ್ರಕರಣಗಳು ಬಯಲಾಗಿವೆ. ಆರೋಪಿಯಿಂದ ಡೆಲ್ ಕಂಪನಿಯ 4, ಹೆಚ್.ಪಿ.ಕಂಪನಿಯ 3, ಲೆನೊವೋ ಕಂಪನಿಯ 2 ಸೇರಿದಂತೆ ವಿವಿಧ ಕಂಪನಿಯ ಒಟ್ಟು 10 ಲ್ಯಾಪ್ಟಾಪ್ಗಳು ಸೇರಿದಂತೆ 6.56 ಲಕ್ಷ ರೂ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಎಟಿಎಂ, ಮನೆಗಳ್ಳತನಕ್ಕೆ ಯತ್ನಿಸಿ ಬಸ್ ನಿಲ್ದಾಣಕ್ಕೆ ಬಂದು ಪೊಲೀಸರಿಗೆ ಸೆರೆಸಿಕ್ಕ!