ಕರ್ನಾಟಕ

karnataka

ETV Bharat / state

ಕಡಬ: ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ: ಆರೋಪಿ ಬಂಧನ - Kadaba

ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಮಾಡಿರುವ ಘಟನೆ ಕಡಬದಲ್ಲಿ ನಡೆದಿದೆ.

Acid attack on students in kadaba
ಕಡಬ: ಮೂವರು ಕಾಲೇಜು ಯುವತಿಯರ ಮೇಲೆ ಆ್ಯಸಿಡ್ ದಾಳಿ

By ETV Bharat Karnataka Team

Published : Mar 4, 2024, 11:19 AM IST

Updated : Mar 4, 2024, 1:34 PM IST

ಎಸ್​ಪಿ ಪ್ರತಿಕ್ರಿಯೆ

ಕಡಬ (ದಕ್ಷಿಣ ಕನ್ನಡ):ಯುವಕನೋರ್ವ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಮಾಡಿರುವ ಘಟನೆ ಕಡಬದ ಸರ್ಕಾರಿ ಕಾಲೇಜು ಬಳಿ ಸೋಮವಾರ ಬೆಳಗ್ಗೆ ನಡೆದಿದೆ. ಈ ಸಂಬಂಧ ಕೇರಳ ಮೂಲದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ವಿದ್ಯಾರ್ಥಿನಿಯರೆಲ್ಲರೂ ದ್ವಿತೀಯ ಪಿಯುಸಿ ಓದುತ್ತಿದ್ದು, ಕಡಬ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಕೇರಳ ಮೂಲದ ಎಂಬಿಎ ವಿದ್ಯಾರ್ಥಿ ಅಬಿನ್ (23)​ ಎಂಬ ಯುವಕನನ್ನು ಬಂಧಿಸಿ, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯು ಕಾಲೇಜು ಸಮವಸ್ತ್ರ ಧರಿಸಿಕೊಂಡು ಬಂದಿದ್ದ. ವಿದ್ಯಾರ್ಥಿನಿಯರು ಕಾಲೇಜು ವರಾಂಡದಲ್ಲಿ ಪರೀಕ್ಷಾ ತಯಾರಿ ನಡೆಸುತ್ತಿದ್ದ ವೇಳೆ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿನಿಗೆ ಗಂಭಿರ ಗಾಯಗಳಾಗಿದ್ದು, ಆಕೆಯ ಪಕ್ಕದಲ್ಲಿ ಕುಳಿತಿದ್ದ ಇಬ್ಬರಿಗೆ ಸಣ್ಣಪುಟ್ಟ ಸುಟ್ಟ ಗಾಯಗಳಾಗಿವೆ. ಬಾಲಕಿ ಹಾಗೂ ಆರೋಪಿಯು ಒಂದೇ ಸಮುದಾಯಕ್ಕೆ ಸೇರಿದವರು ಎಂದು ಪೊಲೀಸರು ತಿಳಿಸಿದ್ದಾರೆ.

ಎಸ್​ಪಿ ಪ್ರತಿಕ್ರಿಯೆ:ಈ ಬಗ್ಗೆ ಮಾಹಿತಿ ನೀಡಿದ ದಕ್ಷಿಣ ಕನ್ನಡ ಎಸ್​​ಪಿ ರಿಷ್ಯಂತ್ ಸಿ.ಬಿ., ''ಕಡಬದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ಕಾಲೇಜು ಆವರಣದಲ್ಲಿಯೇ ಯುವಕನೊಬ್ಬ ಆ್ಯಸಿಡ್ ಎರಚಿರುವ ಘಟನೆ ನಡೆದಿದೆ. ಈ ವೇಳೆ ವಿದ್ಯಾರ್ಥಿನಿಯ ಪಕ್ಕದಲ್ಲಿದ್ದ ಇತರ ಇಬ್ಬರು ವಿದ್ಯಾರ್ಥಿನಿಯರಿಗೂ ಆ್ಯಸಿಡ್ ತಗುಲಿ ಸಣ್ಣ ಪ್ರಮಾಣದ ಗಾಯಗಳಾಗಿವೆ. ಈಗಾಗಲೇ ಆರೋಪಿ ಅಬೀನ್ (23) ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಆರೋಪಿ ಮತ್ತು ಆ್ಯಸಿಡ್ ದಾಳಿಗೊಳಗಾದ ವಿದ್ಯಾರ್ಥಿನಿಯು ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಆರೋಪಿಯು ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಬಗ್ಗೆ ಪ್ರಕರಣದ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು'' ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಮದುವೆಯಾಗಲು ನಿರಾಕರಿಸಿದ ಪುತ್ರಿಯನ್ನು ಕೊಂದ ತಂದೆ

Last Updated : Mar 4, 2024, 1:34 PM IST

ABOUT THE AUTHOR

...view details