ಕರ್ನಾಟಕ

karnataka

ETV Bharat / state

ಅನಧಿಕೃತವಾಗಿ ನೀರಿನ ಸಂಪರ್ಕ ಪಡೆದಿರುವ ಪಿಜಿಗಳ ವಿರುದ್ಧ ಕ್ರಮ: ಜಲಮಂಡಳಿ ಅಧ್ಯಕ್ಷ - Bengaluru water board - BENGALURU WATER BOARD

ಅನಧಿಕೃತವಾಗಿ ಕಾವೇರಿ ನೀರಿನ ಸಂಪರ್ಕ, ಒಳಚರಂಡಿ ಸಂಪರ್ಕ ಪಡೆದು 43 ಪಿಜಿಗಳನ್ನು ನಡೆಸಲಾಗುತ್ತಿದೆ ಎಂದು ಸಾರ್ವಜನಿಕರೊಬ್ಬರು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದರು.

Etv Bharat
Etv Bharat

By ETV Bharat Karnataka Team

Published : Apr 5, 2024, 8:50 PM IST

ಬೆಂಗಳೂರು: ಅನಧಿಕೃತವಾಗಿ ಕಾವೇರಿ ನೀರಿನ ಸಂಪರ್ಕ ಪಡೆದಿರುವ ಪಿಜಿಗಳ ವಿರುದ್ಧ ಕ್ರಮಕೈಗೊಂಡು ವಾರದೊಳಗೆ ವರದಿ ಸಲ್ಲಿಸಬೇಕು ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶುಕ್ರವಾರ ನೇರ ಫೋನ್ ಇನ್ ಕಾರ್ಯಕ್ರಮ ನಡೆಸಿದ ಅವರು, ನೀರು ಮತ್ತು ಒಳಚರಂಡಿ ಕುರಿತ ವಿವಿಧ ಅಹವಾಲುಗಳನ್ನು ಆಲಿಸಿದರು. ಸಾರ್ವಜನಿಕರು ತಮ್ಮ ವಲಯ ಪ್ರದೇಶದಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ/ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಗಳ ಕುರಿತು ನೇರವಾಗಿ ಪರಿಹಾರ ಪಡೆದುಕೊಂಡರು.

ಕಾಡುಗೋಡಿ ವಾರ್ಡ್​​ನ ಅಂಬೇಡ್ಕರ್ ನಗರದಲ್ಲಿ ಅನಧಿಕೃತವಾಗಿ ಕಾವೇರಿ ನೀರಿನ ಸಂಪರ್ಕ, ಒಳಚರಂಡಿ ಸಂಪರ್ಕ ಪಡೆದು 43 ಪಿಜಿಗಳನ್ನು ನಡೆಸಲಾಗುತ್ತಿದೆ ಎಂದು ದೂರವಾಣಿ ಮೂಲಕ ಸಾರ್ವಜನಿಕರೊಬ್ಬರು ದೂರು ನೀಡಿದರು. ಇದಕ್ಕೆ ಸ್ಪಂದಿಸಿದ ರಾಮ್ ಪ್ರಸಾತ್ ಮನೋಹರ್, ನಗರದ ಹಲವಾರು ಭಾಗಗಳಿಂದ ಇಂತಹ ದೂರುಗಳು ಬರುತ್ತಿವೆ. ವಾಣಿಜ್ಯ ಉದ್ದೇಶದ ಸಂಪರ್ಕ ಪಡೆದುಕೊಂಡು ಪಿಜಿಗಳನ್ನು ನಡೆಸುವುದಕ್ಕೆ ಯಾವುದೇ ಸಮಸ್ಯೆ ಇಲ್ಲ. ಆದರೆ, ಅನಧಿಕೃತವಾಗಿ ನೀರಿನ ಮತ್ತು ಒಳಚರಂಡಿ ಸಂಪರ್ಕ ಪಡೆದುಕೊಳ್ಳುವುದು ಹಾಗೂ ಆ ಪ್ರದೇಶಗಳಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ನಡೆಸುವುದು ಸರಿಯಲ್ಲ. ಇದರಿಂದ ಜಲಮಂಡಳಿಗೆ ನಷ್ಟವಾಗುತ್ತದೆ. ಈ ಬಗ್ಗೆ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕು. ಒಂದು ವಾರದೊಳಗೆ ಈ ಬಗ್ಗೆ ಪರಿಶೀಲನೆ ನಡೆಸಿ ವರದಿಯನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇಂದು ದಾಖಲಾದ ದೂರಗಳನ್ನ ನಿವಾರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕು. ಇದನ್ನು ಖಚಿತ ಪಡಿಸುವ ನಿಟ್ಟಿನಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಗಳು ದೂರುಗಳನ್ನು ಲಿಖಿತ ರೂಪದಲ್ಲಿ ಸಂಬಂಧ ಪಟ್ಟ ಮುಖ್ಯ ಇಂಜಿನಿಯರ್​​ಗಳಿಗೆ ಕಳುಹಿಸಿಕೊಡಬೇಕು. ಸಮಸ್ಯೆಗಳನ್ನು ಪರಿಹರಿಸಿರುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಮುಂದಿನ ವಾರದೊಳಗೆ ವರದಿಯನ್ನು ಸಲ್ಲಿಸಬೇಕು ಎಂದು ಈ ಸಂದರ್ಭದಲ್ಲಿ ಸೂಚನೆ ನೀಡಿದರು.

ಇದನ್ನೂ ಓದಿ:4,000 ನಲ್ಲಿಗಳಿಗೆ ಏರಿಯೇಟರ್​​ ಅಳವಡಿಕೆ: ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್​​ ಮನೋಹರ್​​ - aerators installed

ಹಾರೋಹಳ್ಳಿಯ ಮಾಗಡಿ ರಸ್ತೆ ಬಳಿಯ ತುಂಗಾಭದ್ರಾ ಬಡಾವಣೆ ನಿವಾಸಿ ವಿದ್ಯಾ, ಬೆಂಗಳೂರು ಜಲಮಂಡಳಿಯ ಕೊಳವೆ ಬಾವಿಯಲ್ಲಿ ನೀರು ಕಡಿಮೆ ಪ್ರಮಾಣದಲ್ಲಿ ಬರುತ್ತಿದೆ. ಇನ್ನಷ್ಟು ಆಳಕ್ಕೆ ಕೊರೆಯಿಸಿದಲ್ಲಿ ನೀರಿನ ಪ್ರಮಾಣ ಹೆಚ್ಚಿಗೆಯಾಗುತ್ತದೆ ಮತ್ತು ಮೊದಲಿನ ಪ್ರಮಾಣದಲ್ಲಿ ನೀರು ನಮ್ಮ ಬಡಾವಣೆ ಜನರಿಗೆ ಸಿಗುತ್ತದೆ. ಈ ಮೂಲಕ ಅನುಕೂಲವಾಗುತ್ತದೆ ಎನ್ನುವುದನ್ನು ಗಮನಕ್ಕೆ ತಂದರು. ಇಂದೇ ಆ ಕೊಳವೆ ಬಾವಿಗೆ ಅಗತ್ಯವಿರುವ ಹೆಚ್ಚಿನ ಪೈಪ್ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ:ಕಾವೇರಿ 5ನೇ ಹಂತದ ಯೋಜನೆ ಪೂರ್ಣಗೊಳಿಸಲು ಟ್ರಾಫಿಕ್‌ ಪೊಲೀಸರಿಂದ ಸಹಕಾರದ ಭರವಸೆ - Kaveri 5th Phase

ವಿಲ್ಸನ್ ಗಾರ್ಡ್ನ್ ಬಳಿಯ ಬಿಟಿಎಸ್ ರಸ್ತೆಯ ಬಳಿ ಜಲಮಂಡಳಿ ಪೈಪ್​​ನಿಂದ ನೀರು ಸೋರಿಕೆಯಾಗುತ್ತಿದೆ ಎಂದು ವೀಣಾ ದೂರು ನೀಡಿದರು. ನೀರು ಸೋರಿಕೆಯ ತಡೆಯಲು ಇಂದೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ರಾಮ್ ಪ್ರಸಾತ್ ಮನೋಹರ್ ವಾರದೊಳಗೆ ಕ್ರಮ ಕೈಗೊಳ್ಳದೇ ಇದ್ದಲ್ಲಿ 1916 ಗೆ ದೂರು ನೀಡುವಂತೆ ವೀಣಾ ಸೂಚಿಸಿದರು. ನೀರು ಉಳಿತಾಯ ಹಾಗೂ ಅಂತರ್ಜಲ ವೃದ್ಧಿಗೆ ಜಲಮಂಡಳಿ ವತಿಯಿಂದ ಕೈಗೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆಯೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪ್ರಧಾನ ಮುಖ್ಯ ಎಂಜನಿಯರ್ ಸುರೇಶ, ಮುಖ್ಯ ಎಂಜನಿಯರ್​​ಗಳಾದ ಎಲ್.ಕುಮಾರನಾಯಕ್, ಕೆ.ಎನ್.ಪರಮೇಶ, ಎಸ್.ವಿ.ವೆಂಕಟೇಶ, ಎ.ರಾಜಶೇಖರ್, ಕೆ.ಎನ್. ಮಹೇಶ, ಕೆ.ಎನ್ ರಾಜೀವ್, ಬಿ.ಸಿ. ಗಂಗಾಧರ್, ಎಂ ದೇವರಾಜು, ಜಯಶಂಕರ್, ಅಪರ ಮುಖ್ಯ ಎಂಜನಿಯರ್ ಮಧುಸೂಧನ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.

ಇದನ್ನೂ ಓದಿ:ಎಚ್ಚರ! ಬೇಸಿಗೆ ಎಂದು ಅತಿ ಹೆಚ್ಚು ನೀರು ಕುಡಿಯುವುದರಿಂದಲೂ ಇದೆ ಆಪತ್ತು - Drinking excessive water problem

ABOUT THE AUTHOR

...view details