ಮೈಸೂರು: ನಾಡ ಅಧಿದೇವತೆ ಚಾಮುಂಡಿ ಬೆಟ್ಟಕ್ಕೆ ನಟ ದರ್ಶನ್ ಭೇಟಿ ನೀಡಿ ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಜೊತೆ ಚಾಮುಂಡೇಶ್ವರಿ ಸನ್ನಿಧಿಗೆ ಆಗಮಿಸಿದ ನಟ ವಿಶೇಷ ಪೂಜೆ ಸಲ್ಲಿಸಿದರು.
ಚಾಮುಂಡೇಶ್ವರಿಯ ಪರಮ ಭಕ್ತರಾದ ನಟ ದರ್ಶನ್ ಪ್ರತೀ ವರ್ಷ ಅಷಾಢ ಮಾಸದ ಸಂದರ್ಭ ತಪ್ಪದೇ ಚಾಮುಂಡೇಶ್ವರಿಯ ದರ್ಶನ ಪಡೆಯುತ್ತಾರೆ. ಆದರೆ ಈ ಬಾರಿ ಬರಲು ಸಾಧ್ಯವಾಗಲಿಲ್ಲ. ಪ್ರಕರಣವೊಂದರಲ್ಲಿ ಸಿಲುಕಿದ ಹಿನ್ನೆಲೆ ಕಳೆದ 8 ತಿಂಗಳಿನಿಂದ ಚಾಮುಂಡಿ ಬೆಟ್ಟಕ್ಕೆ ಅಗಮಿಸಿರಲಿಲ್ಲ. ಫೈನಲಿ ಇಂದು ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ನಿನ್ನೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ತಮ್ಮ ಬೆನ್ನುನೋವಿಗೆ ವೈದರ ಸಲಹೆ ಪಡೆದು ಬಂದ ಬಳಿಕ ಮಂಡ್ಯ ಜಿಲ್ಲೆಯ ಶಕ್ತಿ ದೇವತೆ ಆರತಿ ಉಕ್ಕಡದಮ್ಮನ ದರ್ಶನ ಪಡೆದಿದ್ದರು.