ಮಂಡ್ಯ:ಮಂಡ್ಯ ಲೋಕಸಭಾ ಅಖಾಡ ತೀವ್ರ ಕುತೂಹಲ ಮೂಡಿಸಿದ್ದು, ಅಚ್ಚರಿಯ ಬೆಳವಣಿಗೆಯಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಇಂದು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರ ನಡೆಸಲಿದ್ದಾರೆ.
ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ 2019ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಸುಮಲತಾ ಅಂಬರೀಶ್ ಪರವಾಗಿ ನಟರಾದ ದರ್ಶನ್ ಮತ್ತು ಯಶ್ ಮಂಡ್ಯ ಕ್ಷೇತ್ರದ ಪ್ರತಿಯೊಂದು ಗ್ರಾಮಗಳಿಗೂ ತೆರಳಿ ಚುನಾವಣೆ ಪ್ರಚಾರ ನಡೆಸಿದ್ದರು. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿ ಅವರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದರ್ಶನ್, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿರುವುದು ಅಚ್ಚರಿಗೆ ಕಾರಣವಾಗಿದೆ.
ಬೆಳಗ್ಗೆ 9.30 ಗಂಟೆಗೆ ಹಲಗೂರಿನಿಂದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಹಾಗೂ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಜೊತೆಗೂಡಿ ಚುನಾವಣಾ ಪ್ರಚಾರ ಆರಂಭಿಸುವ ದರ್ಶನ್ ಅವರು ನಂತರ ಹುಸ್ಕೂರು, ಹಾಡ್ಲಿ ಸರ್ಕಲ್, ಮಳವಳ್ಳಿ ಪಟ್ಟಣ, ಬೆಳಕವಾಡಿ, ಬೊಪ್ಪೇಗೌಡನಪುರ, ಸರಗೂರು ಹ್ಯಾಂಡ್ ಪೋಸ್ಟ್, ಪೂರಿಗಾಲಿ, ಟಿ.ಕಾಗೇಪುರ(ತಳಗವಾದಿ), ಬಂಡೂರು, ಹಿಟ್ಟನಹಳ್ಳಿ ಕೊಪ್ಪಲು, ಮಿಕ್ಕೆರೆ, ಕಿರುಗಾವಲು ಸಂತೆಮಾಳ, ಚನ್ನಪಿಳ್ಳೆಕೊಪ್ಪಲು ಗ್ರಾಮಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಈ ಹಿಂದೆ ಸುಮಲತಾ ಬೆಂಬಲಿಗರ ಸಭೆಯಲ್ಲಿ ಬಿಜೆಪಿ ಬೆಂಬಲ ಕೊಟ್ಟಿದ್ದರಿಂದ ಸುಮಲತಾ ಪರ ಇದ್ದ ನಟ ದರ್ಶನ್, ಇದೀಗ ಇವರ ನಡೆ ತೀವ್ರ ಕುತೂಹಲ ಕೆರಳಿಸಿದೆ.
ಇದನ್ನೂ ಓದಿ:ಪ್ರತೀ ಚುನಾವಣೆಯಲ್ಲಿ ಮಂಗಳೂರು ಭೇಟಿ ತಪ್ಪಿಸಿಕೊಳ್ಳದ ಪ್ರಧಾನಿ ಮೋದಿ: ಕಾರಣವೇನು? - MODI MANGALURU VISITS