ಬೆಂಗಳೂರು: ಕಳೆದ ಒಂದು ವಾರದಿಂದ ಸಿನಿಮಾರಂಗದಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ ಭಾರಿ ಸುದ್ಧಿಯಲ್ಲಿದೆ. ಸದ್ಯ ಈ ಪ್ರಕರಣದಿಂದ ಚಿತ್ರರಂಗಕ್ಕೆ ಕಪ್ಪು ಚುಕ್ಕೆಯಾಗಿದೆ. ಇದೀಗ ನಟ ಮತ್ತು ನಿರ್ದೇಶಕ ಉಪೇಂದ್ರ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಮೌನ ಮುರಿದಿದ್ದಾರೆ. ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪ್ರಕರಣದ ಬಗ್ಗೆ ತಮ್ಮ ಅಭಿಪ್ರಾಯವನ್ನ ಹಂಚಿಕೊಂಡಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ, "ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ ಮತ್ತು ಕೊಲೆ ಪ್ರಕರಣದ ವಿಚಾರಣೆ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ. ಈ ಹೈ ಪ್ರೊಫೈಲ್ ಕೇಸ್ನ ವಿಚಾರಣೆಯಲ್ಲಿ ನಿಷ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ರೇಣುಕಾ ಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟೀವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ, ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ".
"ಏಕೆಂದರೆ ಯಾವುದೇ ಕೇಸ್ ಆದರೂ ಆ ಕೇಸ್ನ ವಿಚಾರಣೆಯ ವಿಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೊಲೀಸರು ಸಂಬಂಧ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು. (ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರೆದಿದ್ದು ಎಲ್ಲವನ್ನೂ ವಿಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು" (ಕಾನೂನು ಸುಧಾರಣೆಗಳು Criminal Justice Reforms)