ಚಾಮರಾಜನಗರ:ಲೋಕಸಭಾ ಕ್ಷೇತ್ರದಲ್ಲಿ ಮತದಾನ ಆರಂಭಗೊಂಡು ಬಿರುಸಿನ ಮತದಾನ ನಡೆಯುತ್ತಿದೆ. ಬೆಳ್ಳಂಬೆಳಗ್ಗೆ ಮತಗಟ್ಟೆಗೆ ಮತದಾರರು ಉತ್ಸಾಹದಿಂದ ಆಗಮಿಸಿ ಉತ್ಸಾಹದಿಂದಲೇ ಮತದಾನ ಮಾಡುತ್ತಿದ್ದಾರೆ. ದೂರದ ಊರಿನಿಂದಲೂ ಸ್ವಗ್ರಾಮಕ್ಕೆ ಬಂದ ಯುವಕರು, ಹಿರಿಯ ನಾಗರಿಕರು ಮತದಾನ ಮಾಡುತ್ತಿದ್ದಾರೆ.
ಚಾಮರಾಜನಗರದಲ್ಲಿ ಮತದಾನ ಚುರುಕು: ಬೆಂಗಳೂರಿನಿಂದ ಸ್ವಗ್ರಾಮಕ್ಕೆ ಬಂದು ಹಕ್ಕು ಚಲಾಯಿಸಿದ ಕೆಂಡಸಂಪಿಗೆ ನಾಯಕ - Actor Vikky Varun voting - ACTOR VIKKY VARUN VOTING
ಚಾಮರಾಜನಗರದಲ್ಲಿ ಲೋಕಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ನಟ ವಿಕ್ಕಿ ವರುಣ್ ತಮ್ಮ ಗ್ರಾಮಕ್ಕೆ ಆಗಮಿಸಿ ಮತದಾನ ಮಾಡಿದರು.
Published : Apr 26, 2024, 9:31 AM IST
|Updated : Apr 26, 2024, 10:46 AM IST
ಕೆಂಡಸಂಪಿಗೆ ಹೀರೋ ಮತದಾನ:ಚಾಮರಾಜನಗರ ತಾಲೂಕಿನ ಮೂಡಲಪುರ ಗ್ರಾಮದಲ್ಲಿ ನಟ ವಿಕ್ಕಿ ವರುಣ್ ಮತದಾನ ಮಾಡಿದ್ದಾರೆ. ಮಧ್ಯರಾತ್ರಿ ಬೆಂಗಳೂರಿನಿಂದ ಬಂದು ಬೆಳಗ್ಗೆಯೇ ಕೆಂಡಸಂಪಿಗೆ ಹೀರೋ ಮತದಾನ ಮಾಡಿ ಮತದಾನದ ಮಹತ್ವ ಸಾರಿದ್ದಾರೆ. ಸ್ವ ಗ್ರಾಮದಲ್ಲಿ
ಮತದಾನ ಬಳಿಕ ಸ್ಯಾಂಡಲ್ವುಡ್ ಹೀರೋ ವಿಕ್ಕಿ ಮಾತನಾಡಿ, 'ದೇಶದ ಅಭಿವೃದ್ಧಿಗಾಗಿ ಮತದಾನ ಪ್ರತಿಯೊಬ್ಬರು ಮತದಾನ ಮಾಡಬೇಕು. ಮತದಾನ ಪ್ರತಿಯೊಬ್ಬರ ಜವಾಬ್ದಾರಿ, ದೇಶಕ್ಕಾಗಿ, ನಾಡಿಗಾಗಿ ನಮ್ಮ ಊರಿಗಾಗಿ ಪ್ರತಿಯೊಬ್ಬರು ಮತದಾನ ಮಾಡಲೇಬೇಕು, ನಾನು ಬೆಂಗಳೂರಿಗೆ ಶಿಫ್ಟ್ ಆಗಿದ್ದರೂ ಮತದಾನದ ಹಕ್ಕನ್ನು ಊರಲ್ಲೇ ಉಳಿಸಿಕೊಂಡಿದ್ದೇನೆ" ಎಂದರು.