ತುಮಕೂರು :ಗೆಳೆಯನ ಜತೆ ಜಾತ್ರೆಗೆ ಬಂದಿದ್ದ ಬಾಲಕಿಗೆ ಬ್ಲ್ಯಾಕ್‌ಮೇಲ್ ಮಾಡಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ.
ಸೋಮವಾರ ಸ್ನೇಹಿತನ ಜತೆ ಸಿದ್ಧಗಂಗಾಮಠದ ಜಾತ್ರೆಗೆ ಬಂದಿದ್ದ ವಿದ್ಯಾರ್ಥಿನಿ ಬೆಟ್ಟಕ್ಕೆ ಹೋಗುವ ದಾರಿಯಲ್ಲಿ ಕುಳಿತಿದ್ದಾಗ ಆರೋಪಿಗಳು ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುವುದಾಗಿ ಹೆದರಿಸಿದ್ದರು.
ಬಳಿಕ ಬೈಕ್‌ನಲ್ಲಿ ಬಾಲಕಿಯನ್ನು ರೂಮ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ದೌರ್ಜನ್ಯ ಎಸಗಿದ ಬಳಿಕ ಸಂತ್ರಸ್ತೆಯನ್ನು ಮತ್ತೆ ಮಠದ ಬಳಿ ತಂದು ಬಿಟ್ಟು ಪರಾರಿಯಾಗಿದ್ದಾರೆ. ಈ ಸಂಬಂಧ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಕೃತ್ಯದಲ್ಲಿ ಭಾಗಿಯಾದ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ :ಬೆಂಗಳೂರು: ಯುವತಿಯ ಅತ್ಯಾಚಾರ, ಕೊಲೆ; ಆಟೋ ಚಾಲಕನ ಬಂಧನ