ಕರ್ನಾಟಕ

karnataka

ETV Bharat / state

ರಜೆ ಮುಗಿಸಿ ಹಿಂದಿರುಗುವವರಿಗೆ ವಾಯವ್ಯ ಕರ್ನಾಟಕ ಸಾರಿಗೆಯಿಂದ 21 ಹೆಚ್ಚುವರಿ ಬಸ್​ಗಳ ವ್ಯವಸ್ಥೆ - extra buses

ಸ್ವಾತಂತ್ರ್ಯ ದಿನಾಚರಣೆ, ವರಮಹಾಲಕ್ಷ್ಮಿ ಹಬ್ಬ, ವಿಕೆಂಡ್​ ಹಿನ್ನೆಲೆ ರಜೆ ಮುಗಿಸಿ ತಮ್ಮ ತಮ್ಮ ಕೆಲಸಗಳಿಗೆ ತೆರಳುವ ಪ್ರಯಾಣಿಕರಿಗಾಗಿ ಹುಬ್ಬಳ್ಳಿಯಲ್ಲಿ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ.

ADDITIONAL BUSES
ವಾಯವ್ಯ ಕರ್ನಾಟಕ ಸಾರಿಗೆಯಿಂದ 21 ಹೆಚ್ಚುವರಿ ಬಸ್​ಗಳ ವ್ಯವಸ್ಥೆ (ETV Bharat)

By ETV Bharat Karnataka Team

Published : Aug 19, 2024, 6:52 AM IST

ಹುಬ್ಬಳ್ಳಿ: "ಸರಣಿ ರಜೆ ಮುಗಿಸಿ ಕಾರ್ಯಕ್ಷೇತ್ರಗಳಿಗೆ ಹಿಂದಿರುಗುವವರು ಮತ್ತು ಇತರೆ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ"ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್​. ರಾಮನಗೌಡರ ತಿಳಿಸಿದರು.

ಆಗಸ್ಟ್​​​ 15 ರಂದು ಗುರುವಾರ ಸ್ವಾತಂತ್ರ್ಯ ದಿನಾಚರಣೆ, 16ರಂದು ವರಮಹಾಲಕ್ಷ್ಮಿ ಹಬ್ಬ, 17 ರಂದು ವಾರಾಂತ್ಯ ಶನಿವಾರ ಹಾಗೂ 18 ರಂದು ಭಾನುವಾರ ಹಿನ್ನೆಲೆಯಲ್ಲಿ ನೌಕರರು ಸೇರಿದಂತೆ ದೂರದ ಊರುಗಳಲ್ಲಿ ನೆಲೆಸಿರುವ ಹಲವರು ಸ್ವಂತ ಊರುಗಳಿಗೆ ತೆರಳಿದ್ದರು. ಆದ್ದರಿಂದ ಈ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರ ಓಡಾಟವಿತ್ತು. ಅದಕ್ಕೆ ತಕ್ಕಂತೆ ಹೆಚ್ಚುವರಿ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ.

ವಾಯವ್ಯ ಕರ್ನಾಟಕ ಸಾರಿಗೆಯಿಂದ 21 ಹೆಚ್ಚುವರಿ ಬಸ್​ಗಳ ವ್ಯವಸ್ಥೆ (ETV Bharat)

ರಜೆ ಮುಗಿಸಿಕೊಂಡು ತಮ್ಮ ಕಾರ್ಯ ಕ್ಷೇತ್ರಗಳಿಗೆ ಹಿಂದಿರುಗುವವರು ಮತ್ತು ಇತರ ಪ್ರಯಾಣಿಕರಿಂದಾಗಿ ಭಾನುವಾರ ಹುಬ್ಬಳ್ಳಿಯ ಹೊಸೂರು ಬಸ್​ ನಿಲ್ದಾಣ ಹಾಗೂ ಗೋಕುಲ ರಸ್ತೆ ಬಸ್​ ನಿಲ್ದಾಣಗಳಿಂದ ಮಧ್ಯಾಹ್ನದಿಂದಲೇ ನೆರೆಯ ಜಿಲ್ಲೆಗಳು ಹಾಗೂ ದೂರದ ಊರುಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಅಧಿಕವಾಗಿತ್ತು. ಜಿಲ್ಲೆಯೊಳಗೆ ವಿವಿಧ ಸ್ಥಳಗಳು ಸೇರಿದಂತೆ ಬೆಂಗಳೂರು, ದಾವಣಗೆರೆ, ವಿಜಯಪುರ, ಬಾಗಲಕೋಟೆ, ಗದಗ, ಬೆಳಗಾವಿ ಕಡೆಗೆ ಹೆಚ್ಚಿನ ಜನರು ಪ್ರಯಾಣ ಮಾಡಿರುವುದು ಕಂಡುಬಂತು.

ಇನ್ನು ಮುಂಗಡ ಬುಕ್ಕಿಂಗ್ ಸಾರಿಗೆಗಳು ಸೇರಿದಂತೆ ನಿತ್ಯದ ಎಲ್ಲಾ ಬಸ್ಸುಗಳು ಭರ್ತಿಯಾಗಿದ್ದವು. ಹೆಚ್ಚಿನ ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಮಲ್ಟಿ ಆ್ಯಕ್ಸಲ್​ ವೋಲ್ವೋ, ರಾಜಹಂಸ ಹಾಗೂ ವೇಗಧೂತ ಸಾರಿಗೆಗಳು ಸೇರಿದಂತೆ ಒಟ್ಟು 21 ಹೆಚ್ಚುವರಿ ವಿಶೇಷ ಬಸ್ಸುಗಳನ್ನು ಸಂಚಾರಕ್ಕೆ ಬಿಡಲಾಗಿದೆ. ಅಧಿಕಾರಿಗಳಾದ ಪಿ.ವೈ. ಗಡಾದ, ಸದಾನಂದ ಒಡೆಯರ್, ಐ.ಐ. ಕಡ್ಲಿಮಟ್ಟಿ, ಐ.ಜಿ. ಮಾಗಾಮಿ, ಡಿಪೊ‌ ಮ್ಯಾನೇಜರ್​ಗಳಾದ ರೋಹಿಣಿ, ಮುನ್ನಾಸಾಬ್, ನಾಗರಾಜ ಮತ್ತು ಸಿಬ್ಬಂದಿಗಳು ಪ್ರಮುಖ ಬಸ್​ ನಿಲ್ದಾಣಗಳಲ್ಲಿ ಹಾಜರಿದ್ದು ತಡರಾತ್ರಿಯವರೆಗೆ ವಿಶೇಷ ಬಸ್ಸುಗಳ ಮೇಲ್ವಿಚಾರಣೆ ಮಾಡಿದರು ಎಂದು ನಿಯಂತ್ರಣಾಧಿಕಾರಿ ಮಾಹಿತಿ ನೀಡಿದರು.

ಇದನ್ನೂ ಓದಿ:ಹುಬ್ಬಳ್ಳಿ-ಧಾರವಾಡ ನಗರಕ್ಕೆ ಅತ್ಯಾಧುನಿಕ ಬಸ್​ಗಳ​ ವ್ಯವಸ್ಥೆ: ಪ್ರಾಯೋಗಿಕವಾಗಿ 10 ಬಸ್‌ಗಳ ಸಂಚಾರ ಆರಂಭ - advanced bus to twin cities

ABOUT THE AUTHOR

...view details