ಹುಬ್ಬಳ್ಳಿ:ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಾರ್ವಜನಿಕರು ತಮ್ಮೂರುಗಳಿಗೆ ತೆರಳುವುದರಿಂದ, ವಾ.ಕ.ರ.ಸಾ.ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 114 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ವಾಯುವ್ಯ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಮಂಗಳವಾರ ಸಂಕ್ರಾಂತಿ ಹಬ್ಬವಾಗಿದ್ದು, ಎರಡನೇ ಶನಿವಾರ ಹಾಗೂ ಭಾನುವಾರ ಆಗಿರುವ ಕಾರಣ ಬೆಂಗಳೂರು ಮತ್ತು ಇತರೆ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ತೆರಳಲಿದ್ದಾರೆ.