ಕರ್ನಾಟಕ

karnataka

ETV Bharat / state

ಬಾಣಂತಿಯರ ಮರಣ ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ: ಸಿಎಂ ಸಿದ್ದರಾಮಯ್ಯ - CM SIDDARAMAIAH

ಬಳ್ಳಾರಿ ಜಿಲ್ಲೆಯಲ್ಲಿ ಬಾಣಂತಿಯರ ಸಾವು ಪ್ರಕರಣ ಸಂಬಂಧಿಸಿ ಸಿಎಂ ಚಾಮರಾಜನಗರದಲ್ಲಿ ಪ್ರತಿಕ್ರಿಯಿಸಿದ್ದಾರೆ.

CM SIDDARAMAIAH
ಸಿಎಂ ಸಿದ್ದರಾಮಯ್ಯ (ETV Bharat)

By ETV Bharat Karnataka Team

Published : Dec 7, 2024, 1:27 PM IST

Updated : Dec 7, 2024, 2:15 PM IST

ಚಾಮರಾಜನಗರ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣ ಸಂಬಂಧ ಈಗಾಗಲೇ ಕ್ರಮ ಕೈಗೊಂಡಿದ್ದೇವೆ, ಮುಂದೆಯೂ ಕ್ರಮ ಕೈಗೊಳ್ಳುತ್ತೇವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೊಳ್ಳೇಗಾಲ ತಾಲೂಕಿನ ನರಿಪುರ ಹೆಲಿಪ್ಯಾಡ್​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರು ಮೃತಪಟ್ಟಿರುವ ಸಂಬಂಧ ನಾನು ಈಗಾಗಲೇ ಮೀಟಿಂಗ್ ಮಾಡಿದ್ದೆ. ಇವತ್ತು‌ ಆರೋಗ್ಯ ಸಚಿವರು ಮತ್ತು ಇಲಾಖೆ ಅಧಿಕಾರಿಗಳು ಅಲ್ಲಿಗೆ ಹೋಗುತ್ತಿದ್ದಾರೆ" ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ (ETV Bharat)

"ಜೌಷಧಿ ಸರಿ ಇಲ್ಲ ಎಂದು ಡ್ರಗ್​​ ಕಂಟ್ರೋಲರ್​ನ ಅಮಾನತು ಮಾಡಿದ್ದೇವೆ. ಜೌಷಧಿ ವಿತರಣೆ ಮಾಡಿದ್ದವರನ್ನು ಕಪ್ಪು ಪಟ್ಟಿಗೆ ಹಾಕಿದ್ದೇವೆ. ಜೊತೆಗೆ ಒಂದು ಕಮಿಟಿ ಕೂಡ ಮಾಡಿದ್ದೆವು. ಅವರಿಗೆ ವರದಿ ಕೊಡಲು ಹೇಳಿದ್ದೇವೆ. ಅವರು ವರದಿ ಕೊಟ್ಟ ಮೇಲೆ ಯಾರು ತಪ್ಪಿತಸ್ಥರು ಇದ್ದಾರೋ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಕ್ರಮ ತೆಗೆದುಕೊಂಡಿದ್ದೇವೆ. ಮುಂದೆಯೂ ತೆಗೆದುಕೊಳ್ಳುತ್ತೇವೆ" ಎಂದರು.

ಇದನ್ನೂ ಓದಿ:ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು: ಆಸ್ಪತ್ರೆಗಳಿಗೆ ಸರ್ಚ್​​ ವಾರಂಟ್​ ಸಹಿತ ಲೋಕಾಯುಕ್ತ ಅಧಿಕಾರಿಗಳ ಭೇಟಿ

Last Updated : Dec 7, 2024, 2:15 PM IST

ABOUT THE AUTHOR

...view details