ಕರ್ನಾಟಕ

karnataka

ETV Bharat / state

ಬಿತ್ತನೆ ಬೀಜ ದರ ಶೇ.30 ರಷ್ಟು ಹೆಚ್ಚಳ: ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ ಹೀಗಿದೆ - Seeds Rate Hike - SEEDS RATE HIKE

ಆಹಾರ ಧಾನ್ಯಗಳ‌ ಬೆಲೆ ನಿಗದಿ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಕಳೆದ ಸಾಲಿನಲ್ಲಿ ಆಹಾರ ಧಾನ್ಯಗಳ ಮಾರಾಟ ದರ ಶೇ.40 ರಷ್ಟು ಏರಿಕೆಯಾಗಿದೆ. ಬಿತ್ತನೆ ಬೀಜ ಖರೀದಿ ಮೇಲೂ ಇದರ ಪರಿಣಾಮ ಬೀರಿದೆ. ಹಾಗಿದ್ದೂ ನಾವು ಬಿತ್ತನೆ ಬೀಜಕ್ಕೆ ಶೇ.30ರಷ್ಟು ದರ ಏರಿಸಿದ್ದೇವೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಕೃಷಿ ಸಚಿವ ಚಲುವರಾಯಸ್ವಾಮಿ
ಕೃಷಿ ಸಚಿವ ಚಲುವರಾಯಸ್ವಾಮಿ (ಸಂಗ್ರಹ ಚಿತ್ರ ETV Bharat)

By ETV Bharat Karnataka Team

Published : May 28, 2024, 5:11 PM IST

ಬೆಂಗಳೂರು: ರಾಜ್ಯದಲ್ಲಿ ಬಿತ್ತನೆ ಬೀಜ ದರ ಹೆಚ್ಚಳದ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟೀಕರಣ ನೀಡಿದ್ದಾರೆ. ಕಳೆದ ಸಾಲಿನಲ್ಲಿ ಆಹಾರ ಧಾನ್ಯಗಳ ಮಾರಾಟ ದರ ಶೇ.40 ರಷ್ಟು ಏರಿಕೆಯಾಗಿದೆ. ಬಿತ್ತನೆ ಬೀಜ ಖರೀದಿ ಮೇಲೂ ಇದರ ಪರಿಣಾಮ ಬೀರಿದೆ. ಹಾಗಿದ್ದೂ ನಾವು ಬಿತ್ತನೆ ಬೀಜಕ್ಕೆ ಶೇ.30ರಷ್ಟು ದರ ಏರಿಸಿದ್ದೇವೆ ಎಂದು ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಬೆಲೆ ಹೆಚ್ಚಳಕ್ಕೆ ಕೆಲವು ಕಾರಣಗಳಿವೆ. 2023-24ನೇ ಸಾಲಿನಲ್ಲಿ ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ಬರ ನಮ್ಮನ್ನು ಕಾಡಿದೆ. 46 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ‌ ಬೆಳೆ ನಷ್ಟವಾದರೂ ಪ್ರಸ್ತುತ ಸಾಲಿಗೆ ಬಿತ್ತನೆ ಬೀಜಕ್ಕೆ ಕೊರತೆಯಾಗದ ರೀತಿ ಮುಂಜಾಗ್ರತೆ ವಹಿಸಿ ಈಗಾಗಲೇ ಪೂರೈಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಆಹಾರ ಧಾನ್ಯಗಳ‌ ಬೆಲೆ ನಿಗದಿ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಕಳೆದ ಸಾಲಿನಲ್ಲಿ ಆಹಾರ ಧಾನ್ಯಗಳ ಮಾರಾಟ ದರ ಶೇ.40 ರಷ್ಟು ಏರಿಕೆಯಾಗಿದೆ. ಬಿತ್ತನೆ ಬೀಜ ಖರೀದಿ ಮೇಲೂ ಇದರ ಪರಿಣಾಮ ಬೀರಿದೆ. ಹಾಗಿದ್ದೂ ನಾವು ಬಿತ್ತನೆ ಬೀಜಕ್ಕೆ ಶೇ.30ರಷ್ಟು ದರ ಏರಿಸಿದ್ದೇವೆ. ಖರೀದಿ, ಗುಣಮಟ್ಟ ನಿಯಂತ್ರಣ, ಸಂಸ್ಕರಣೆ, ಪ್ರಯೋಗಾಲಯದಲ್ಲಿ ಪರೀಕ್ಷೆ, ಗ್ರೇಡಿಂಗ್, ದಾಸ್ತಾನು ಮಾಡುವುದು, ಸಾಗಣೆ, ಬೀಜ ಪ್ರಮಾಣೀಕರಣ, ಕಾರ್ಮಿಕರ ಕೂಲಿ‌ ಹಣ ಎಲ್ಲಾ ಸೇರಿಸಿ ಬಿತ್ತನೆ ಬೀಜದ ಮಾರಾಟ ದರ ನಿಗದಿಯಾಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಮುಂಗಾರು‌ ಕೃಷಿ ಚಟುವಟಿಕೆ ಚುರುಕು: ರೈತರಿಗೆ ತಟ್ಟಿದ ಬೀಜ ಗೊಬ್ಬರ ಬೆಲೆ ಏರಿಕೆ‌ ಬಿಸಿ - Monsoon agricultural activity

ಬಿತ್ತನೆ ಬೀಜವನ್ನು ಸರ್ಕಾರ ‌ಹಾಗೂ ಖಾಸಗಿ ಸಂಸ್ಥೆಗಳು ನೇರವಾಗಿ ರೈತ ಬೀಜೋತ್ಪಾದಕರಿಂದ ಖರೀದಿಸುತ್ತಿವೆ. ಬೆಲೆ ಹೆಚ್ಚಳದ ಲಾಭವೂ ರೈತ ಬಿಜ ಉತ್ಪಾದಕರಿಗೇ ವರ್ಗಾವಣೆ ಆಗುತ್ತಿದೆ. ಇದು ನಮ್ಮ ಸರ್ಕಾರ ಬಂದ ನಂತರ ಮಾಡಿರುವ ಖರೀದಿ‌ ಮಾರಾಟ ಪ್ರಕ್ರಿಯೆ ಅಲ್ಲ. ಹಿಂದಿನ ಸರ್ಕಾರಗಳ ಅವಧಿಯಲ್ಲಿ ಅನುಸರಿಸಲಾದ ಕ್ರಮvನ್ನು ಮುಂದುವರೆಸಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ.

ನೆರೆಯ ಮಹಾರಾಷ್ಟ್ರದಲ್ಲಿಯೂ ನಮ್ಮ ರಾಜ್ಯಕ್ಕಿಂತ ಹೆಚ್ಚಿನ ದರ ನಿಗದಿ ಮಾಡಲಾಗಿದೆ. ರಾಜ್ಯದಲ್ಲಿ ಅತೀ ಹೆಚ್ಚು ಬೆಳೆಯುವ ಶೇಂಗಾದ ಬಿತ್ತನೆ ಬೀಜದ ಬೆಲೆ ಶೇ.1ರಷ್ಟು ಮಾತ್ರ ಏರಿಕೆಯಾಗಿದೆ. ಹಾಗೆಯೇ ಸೊಯಾಬೀನ್ ಬಿತ್ತನೆ ಬೀಜದ ಮಾರಾಟ ದರ ಶೇ.8ರಷ್ಟು ಇಳಿಕೆಯಾಗಿದೆ. ರೈತರ ಹಿತ ನಮ್ಮ ಆದ್ಯತೆ. ಜೆಡಿಎಸ್​​ಗೆ ತಮ್ಮ ಕಾಳಜಿಯ ನುಡಿಗೆ ಧನ್ಯವಾದಗಳು. ನಾನು‌ ಇಲ್ಲೇ ಕರ್ನಾಟಕ ರಾಜ್ಯದಲ್ಲೇ ಇದ್ದೇನೆ. ಯಾವಾಗ ಬೇಕಿದ್ದರೂ ಸಂಪರ್ಕಕ್ಕೆ ಸಿಗುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ಬಿತ್ತನೆ ಬೀಜ - ರಸಗೊಬ್ಬರ ಸಾಕಷ್ಟು ಪ್ರಮಾಣದಲ್ಲಿದೆ, ರೈತರು ಆತಂಕ ಪಡುವ ಅಗತ್ಯ ಇಲ್ಲ: ಕೃಷಿ ಸಚಿವ - Chaluvarayaswamy

ABOUT THE AUTHOR

...view details