ಮೈಸೂರು:ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶ್ರೀನಿವಾಸಪ್ರಸಾದ್ ಅವರ ಅಂತಿಮ ದರ್ಶನ ಪಡೆದರು. ಶ್ರೀನಿವಾಸಪ್ರಸಾದ್ ನಿಧನದಿಂದ ತುಂಬಾ ಆಘಾತ ಆಗಿದೆ ಎಂದು ಹೇಳಿದರು.
ಶ್ರೀನಿವಾಸಪ್ರಸಾದ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ - Mallikarjuna Kharge - MALLIKARJUNA KHARGE
ಶ್ರೀನಿವಾಸಪ್ರಸಾದ್ ಅವರ ಅಂತಿಮ ದರ್ಶನ ಪಡೆದ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.
Published : Apr 30, 2024, 12:59 PM IST
|Updated : Apr 30, 2024, 1:20 PM IST
ಶ್ರೀನಿವಾಸಪ್ರಸಾದ್ ಅವರ ಅಂತಿಮ ದರ್ಶನ ಪಡೆದ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಅವರು ಸಮಾಜಕ್ಕಾಗಿ ಹೋರಾಟ ಮಾಡಿದ್ದಾರೆ. ಧೈರ್ಯದಿಂದ ಮುನ್ನುಗಿದ ಪ್ರಾಮಾಣಿಕ ರಾಜಕಾರಣಿ. ಬಾಬಾ ಸಾಹೇಬ್ ಅಂಬೇಡ್ಕರ್ ತತ್ವದಲ್ಲಿ ನಂಬಿಕೆ ಇಟ್ಟವರು. ಅವರು ಸ್ವಾಭಿಮಾನದಿಂದ ಬದುಕಿದಂತಹ ರಾಜಕಾರಣಿ. ಅನಾರೋಗ್ಯದಿಂದ ನಮ್ಮನ್ನು ಅಗಲಿದ್ದಾರೆ. ಅವರ ಕುಟುಂಬಕ್ಕೆ ನೋವು ತಡೆಯುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಬೇಡಿ ಕೊಳ್ಳುವೆ ಎಂದು ಹೇಳಿದರು.
ಓದಿ:ಹಾಸನ ವಿಡಿಯೋ ಪ್ರಕರಣ: ಎಸ್ಐಟಿ ತಂಡಕ್ಕೆ 18 ಮಂದಿ ಅಧಿಕಾರಿಗಳು, ಸಿಬ್ಬಂದಿ ನಿಯೋಜಿಸಿದ ಸರ್ಕಾರ - Hassan Video case